ಕೊರೊನಾ ಗೆದ್ದ ಎಚ್.ಡಿ. ದೇವೇಗೌಡ ದಂಪತಿ: ಆಸ್ಪತ್ರೆಯಿಂದ ಮಾಜಿ ಪ್ರಧಾನಿ ಡಿಸ್ಚಾರ್ಜ್

ಬೆಂಗಳೂರು, ಏ. 05: ಕೊರೊನಾ ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಪತ್ನಿ ಚೆನ್ನಮ್ಮ ಅವರು ಗುಣಮುಖರಾಗಿದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಕಳೆದ 2 ದಿನಗಳ ಹಿಂದೆ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮಗೂ ಕೊರೊನಾ ಪಾಸಿಟಿವ್  ದೃಢಪಟ್ಟಿತ್ತು. ಹೀಗಾಗಿ, ನಗರ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ದಾಖಲಾದ ನಂತರ ಕೊರನಾ ಪರೀಕ್ಷೆಗೆ ಒಳಪಡಿಸಿದಾಗ ದೇವೇಗೌಡರಿಗೆ ಕೊರೋನಾ ನೆಗೆಟಿವ್ ಎಂಬುದಾಗಿ ದೃಢಪಟ್ಟರೇ, ಚೆನ್ನಮ್ಮ ಅವರಿಗೆ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿತ್ತು.

ಈ ಬಳಿಕ ಮತ್ತೊಮ್ಮೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಿದಾಗ, ಅವರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ, ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನಲೆಯಲ್ಲಿ ಆಸ್ಪತ್ರೆ ಮುಖ್ಯಸ್ಥ ಡಾ.ಸುದರ್ಶನ್ ಬಲ್ಲಾಳ್ ಹೂ ಗುಚ್ಚನೀಡಿ ಡಿಸ್ಚಾರ್ಜ್ ಮಾಡಿದರು.

Exit mobile version