download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಪರದೆಯಲ್ಲಿ ಮತ್ತೆ ಮತ್ತೆ ಮುಖ ತೋರಿಸಿದರೆ ಕೊರೊನಾ ಓಡಿಹೋಗುವುದಿಲ್ಲ: ಮೋದಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಹೇಳಿದ್ದಾರೆ. 'ಪರಿಸ್ಥಿತಿ ಕೈಮೀರಿಹೋಗಿದೆ' ಎಂದು ಕರ್ನಾಟಕದ ಮುಖ್ಯಮಂತ್ರಿಗಳು ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ. ಕೈಲಾಗದ ಮುಖ್ಯಮಂತ್ರಿ ಅವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು, ಏ. 23: ಮುಖ್ಯಮಂತ್ರಿಗಳಿಗೆ ಹೆಡ್‌ ಮಾಸ್ಟರ್‌ ರೀತಿ ಪಾಠ ಮಾಡುವುದನ್ನು ಬಿಟ್ಟು ಕೊರೊನಾ ನಿಯಂತ್ರಿಸುವ ಸಲುವಾಗಿ ರಾಜ್ಯಗಳ ಬೇಡಿಕೆಗಳನ್ನು ಮೊದಲು ಈಡೇರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಪ್ರಶ್ನೆಗಳನ್ನು ಹೇಳಿದ್ದಾರೆ. ‘ಪರಿಸ್ಥಿತಿ ಕೈಮೀರಿಹೋಗಿದೆ’ ಎಂದು ಕರ್ನಾಟಕದ ಮುಖ್ಯಮಂತ್ರಿಗಳು ಜನತೆಯ ಮುಂದೆ ಗೋಳಾಡುತ್ತಿರುವುದರಿಂದ ಪ್ರಶ್ನೆ ನಿಮ್ಮನ್ನೇ ಕೇಳಬೇಕಾಗಿದೆ. ಕೈಲಾಗದ ಮುಖ್ಯಮಂತ್ರಿ ಅವರನ್ನು ಇಟ್ಟುಕೊಂಡು ಕೊರೊನಾ ನಿಯಂತ್ರಣ ಮಾಡುವುದಾದರೂ ಹೇಗೆ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ಶೇ 65ರಷ್ಟು ಸಾಮಾನ್ಯ ಹಾಸಿಗೆ, ಶೇ 96ರಷ್ಟು ಬಹು ಅವಲಂಬನೆಯ ಹಾಸಿಗೆ, ಶೇ 98ರಷ್ಟು ಐಸಿಯು ಹಾಸಿಗೆ ಮತ್ತು ಶೇ 97ರಷ್ಟು ವೆಂಟಿಲೇಟರ್ ಹಾಸಿಗೆ ಭರ್ತಿಯಾಗಿವೆ. ನಿತ್ಯ 15 ಸಾವಿರಕ್ಕೂ ಹೆಚ್ಚು ಸೋಂಕಿತರು ಆಸ್ಪತ್ರೆ ಎದುರು ಕ್ಯೂ ನಿಲ್ಲುತ್ತಿದ್ದಾರೆ. ಅವರದ್ದೇನು ಗತಿ ಎಂದು ಪ್ರಧಾನಿ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಖಾಸಗಿ/ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಮೀಸಲಾದ ಹಾಸಿಗೆಗಳು 7621, ಭರ್ತಿಯಾಗಿರುವುದು 6123, ಲಭ್ಯ ಇರುವುದು 1487 ಮಾತ್ರ. ಆದರೆ ನಿತ್ಯ ದಾಖಲಾಗುತ್ತಿರುವ ಸೋಂಕಿತರ ಸಂಖ್ಯೆ 15 ಸಾವಿರಕ್ಕೂ ಹೆಚ್ಚು. ಈ ವಾಸ್ತವವನ್ನು ರಾಜ್ಯದ ಮುಖ್ಯಮಂತ್ರಿಗಳು ನಿಮಗೇನಾದರೂ ತಿಳಿಸಿದ್ದಾರೆಯೇ?

ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ‌ ಎಂದರೆ ಅಕ್ರಮ ದಾಸ್ತಾನು‌ ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ‌ ಅನುಮತಿ ಪಡೆದು ಆಮ್ಲಜನಕ ರಪ್ತು ಮಾಡಿದ್ದೀರಾ?
ಪ್ರಧಾನಿ‌ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆ ಮತ್ತೆ ಮುಖತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು ನೀವು ಹೆಡ್‌ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೊನಾ ವೈರಸ್‌ ನಿಯಂತ್ರಿಸಿ ಎಂದಿದ್ದಾರೆ.

ದೇಶದ ಹಲವು ರಾಜ್ಯಗಳಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಪರಿಸ್ಥಿತಿಯ ಅವಲೋಕನ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article