ಕೊರೊನಾಗೆ ರಾಜ್ಯದಲ್ಲಿ ಇಬ್ಬರು ಬಲಿ, ನಿಧಾನಗತಿಯಲ್ಲಿ ಮತ್ತೆ ಏರುತ್ತಿರುವ ಕೊರೊನಾ

ಬೆಂಗಳೂರು ನ 2 : ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿದ್ದು, ಮಹಾಮಾರಿಗೆ ಸೋಮವಾರ ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 38084ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 188 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,88,521ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 95 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,51,967ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಇಂದು ಯಾವುದೇ ಕೋವಿಡ್ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 318 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,41,896ಕ್ಕೆ ಏರಿಕೆಯಾಗಿದೆ. ಇನ್ನು 8512 ಸಕ್ರೀಯ ಪ್ರಕರಣಗಳಿವೆ.

Exit mobile version