ಕೊರೊನಾಗೆ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಬಲಿ

ಮುಂಬೈ, ಡಿ. 07: ಕಿರುತೆರೆ ನಟಿ ದಿವ್ಯಾ ಭಟ್ನಾಗರ್(34) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಕೋವಿಡ್-19 ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಟಿ ದಿವ್ಯಾ, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೇ ಅವರ ಆರೋಗ್ಯ ಪರಿಸ್ಥಿತಿ ತೀರಾ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಅವರಿಗೆ ವೆಂಟಿಲೇಟರ್ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅತಿಯಾದ ರಕ್ತದೊತ್ತಡದ ಸಮಸ್ಯೆ ಎದುರಿಸುತ್ತಿದ್ದ ನಟಿ ದಿವ್ಯಾ ಭಟ್ನಾಗರ್, ಕಳೆದೊಂದು ವಾರದಿಂದ ಕೊರೊನಾ ವಿರುದ್ಧ ಹೋರಾಡಿದರು.

Exit mobile version