Visit Channel

ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವವರಿಗೂ ಕೊರೊನಾ ಪರೀಕ್ಷೆ ಮಾಡಿಸಿ: ಸುಪ್ರೀಮ್ ಸೂಚನೆ

199952-supreme-court

ನವದೆಹಲಿ, ಜು. 06: ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿ ದಾಖಲಾಗಿರುವವರಿಗೆ ಕೊರೊನಾ ಸೋಂಕು ಪರೀಕ್ಷೆ ನಡೆಸಲಾಗಿದೆಯೇ ಹಾಗೂ ಅವರಿಗೆ ಕೋವಿಡ್‌ ಲಸಿಕೆ ನೀಡಲು ಕ್ರಮಕೈಗೊಳ್ಳಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿರುವ ರೋಗಿಗಳನ್ನು ಭಿಕ್ಷುಕರ ಕೇಂದ್ರಗಳಿಗೆ ಸ್ಥಳಾಂತರಿಸುವ ಮಹಾರಾಷ್ಟ್ರ ಸರ್ಕಾರದ ಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ‌ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಎಂ. ಆರ್. ಷಾ ಅವರನ್ನೊಳಗೊಂಡ ನ್ಯಾಯಪೀಠ, ‘ಮಾನಸಿಕ ಆರೋಗ್ಯ ಕಾಯ್ದೆಯ ನಿಬಂಧನೆಗಳಿಗೆ ವಿರುದ್ಧವಾಗಿರುವ ಈ ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಸೂಚಿಸಿದೆ.

ಮಾನಸಿಕ ಆರೋಗ್ಯ ಕೇಂದ್ರಗಳಲ್ಲಿರುವವರ ಆರೋಗ್ಯ ರಕ್ಷಣೆ ಮತ್ತು ಲಸಿಕೆ ನೀಡುವ ವಿಷಯದಲ್ಲಿ ಎಲ್ಲ ರಾಜ್ಯಗಳ ಹಾಗೂ ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳು ಸಹಕಾರ ನೀಡುವ ಜತೆಗೆ, ಜುಲೈ 12 ರಂದು ನಡೆಯಲಿರುವ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸಭೆಯಲ್ಲಿ ಭಾಗವಹಿಸುವಂತೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ.

Latest News

atm
ಮಾಹಿತಿ

ATM ಬಳಕೆದಾರರು ಓದಲೇಬೇಕಾದ ಸುದ್ದಿ ; RBI ನಿಯಮಗಳ ಬಗ್ಗೆ ಸರಳವಾಗಿ ತಿಳಿಯಿರಿ

ಇನ್ನು ನಿಮ್ಮ ಬ್ಯಾಂಕ್ ಹೊರತುಪಡಿಸಿ, ಬೇರೆ ಬ್ಯಾಂಕ್ ನ ಎಟಿಎಂಗಳಲ್ಲಿ ಮೆಟ್ರೋ ಸಿಟಿಗಳಲ್ಲಿ ಮೂರು ಬಾರಿ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಐದು ಬಾರಿ ಉಚಿತ ಟ್ರಾನ್ಸಾಕ್ಷನ್ ಮಾಡಬಹುದು.

BJP
ರಾಜಕೀಯ

ಮುಸ್ಲಿಂ ಏರಿಯಾದಲ್ಲಿ ಸಾವರ್ಕರ್ ಫೋಟೋ ಹಾಕಬಾರದಿತ್ತು ಎನ್ನಲು ಸಿದ್ದರಾಮಯ್ಯ ಯಾರು? : ಬಿಜೆಪಿ

ಮತ್ತೊಮ್ಮೆ ದೇಶ ವಿಭಜಿಸುವ ಕಾಂಗ್ರೆಸ್ ಪಕ್ಷದ(Congress Party) ಹಿಡನ್ ಅಜೆಂಡಾ ಸಿದ್ದರಾಮಯ್ಯ ಬಾಯಿಂದ ಬಹಿರಂಗವಾಗಿದೆ ಎಂದಿದೆ.

Fruit
ಮಾಹಿತಿ

ಬಿಪಿ, ಮದುಮೇಹ ಸೇರಿದಂತೆ ಅನೇಕ ಖಾಯಿಲೆಗಳಿಗೆ ರಾಮಬಾಣ ನೇರಳೆ ಹಣ್ಣು ; ಓದಿ ಈ ಉಪಯುಕ್ತ ಮಾಹಿತಿ

ಮಧುಮೇಹ, ಹೃದಯದ ಕಾಯಿಲೆ, ಸಂಧಿವಾತ, ಹೊಟ್ಟೆಯ ಖಾಯಿಲೆಗಳ ನಿಯಂತ್ರಣ ಮತ್ತು ನಿವಾರಣೆಗೂ ಇದು ರಾಮಬಾಣ ಎನ್ನುತ್ತದೆ ಆಯುರ್ವೇದ(Ayurveda).