ನವದೆಹಲಿ, ಮೇ. 28: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,86,364 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿದ್ದು, 3,660 ಮಂದಿ ಸಾವನ್ನಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕಳೆದ 44 ದಿನಗಳಲ್ಲಿ ದೈನಂದಿನ ಸೋಂಕು ಪ್ರಕರಣಗಳಲ್ಲಿ ಕಡಿಮೆ ಏರಿಕೆ ಇದಾಗಿದೆ. ಇದೀಗ ಒಟ್ಟಾರೆ ಕೊವಿಡ್ ಪ್ರಕರಣಗಳ ಸಂಖ್ಯೆ 2,75,55,457 ರಷ್ಟಿದ್ದರೆ, ಒಟ್ಟು ಸಾವಿನ ಸಂಖ್ಯೆ 3,15,235 ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 23.43 ಲಕ್ಷಕ್ಕೆ ಇಳಿದಿದ್ದರೆ, 2.48 ಕೋಟಿಗೂ ಹೆಚ್ಚು ಜನರು ಈ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ. ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಚೇತರಿಕೆಯ ಪ್ರಮಾಣವು ಶೇಕಡಾ 90.34 ಕ್ಕೆ ಏರಿಕೆಯಾಗಿದೆ.
ಭಾರತದ ಎರಡನೇ ಕೊವಿಡ್ -19 ಅಲೆ ಈಗ “ಇಳಿಮುಖವಾಗಿದೆ” ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ. ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ “ತುಂಬಾ” ಹೆಚ್ಚಾಗಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ನಿರ್ಬಂಧಗಳನ್ನು ಸಡಿಲಿಕೆ ಮಾಡದಂತೆ ಸೂಚಿಸಿವೆ. ಕೇಂದ್ರ ಗೃಹ ಸಚಿವಾಲಯದ ಹೊಸ ನಿರ್ದೇಶನದಲ್ಲಿ, ಜೂನ್ 30 ರವರೆಗೆ ನಡೆಯುತ್ತಿರುವ ಕೊವಿಡ್ -19 ಮಾರ್ಗಸೂಚಿಗಳನ್ನು ಮುಂದುವರಿಸಲು ಕೇಂದ್ರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತು. ಹೆಚ್ಚಿನ ಸಂಖ್ಯೆಯಲ್ಲಿರುವ ಜಿಲ್ಲೆಗಳಲ್ಲಿ ಸ್ಥಳೀಯ ಕಂಟೇನ್ ಮೆಂಟ್ ಕ್ರಮಗಳನ್ನು ಕೈಗೊಳ್ಳಲು ಹೇಳಿದೆ.