ಚೆನ್ನೈ, ಮೇ. 07: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಮಹತ್ವದ ತೀರ್ಮಾನ ಕೈಗೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಕೊರೊನಾ ಹಿನ್ನೆಲೆಯಲ್ಲಿ ಪ್ರತಿ ಕುಟುಂಬಕ್ಕೆ ತಲಾ 4 ಸಾವಿರ ರೂ. ನೀಡಲು ಮುಂದಾಗಿದ್ದಾರೆ.
ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್ ಶುಕ್ರವಾರ ನಡೆದ ಸಮಾರಂಭದಲ್ಲಿ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅಧಿಕಾರಿ ಸ್ವೀಕರಿಸಿದ ಮೊದಲ ದಿನವೇ ಮಹಾಮಾರಿ ಕೊರೊನಾ ಹೊಡೆತದಿಂದ ತತ್ತರಿಸಿರುವ ಜನಸಾಮಾನ್ಯರಿಗೆ ನೆರವಾಗುವ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಕೊರೊನಾ ರಿಲೀಫ್ ಫಂಡ್ ಮೂಲಕ ಪ್ರತಿ ಕುಟುಂಬಕ್ಕೆ ತಲಾ 4 ಸಾವಿರ ರೂ. ಬಿಡುಗಡೆ ಮಾಡಲು ನೂತನ ಮುಖ್ಯಮಂತ್ರಿ ಸ್ಟಾಲಿನ್ ತೀರ್ಮಾನಿಸಿದ್ದು, ಇದರ ಮೊದಲ ಕಂತಿನಲ್ಲಿ 2 ಸಾವಿರ ರೂ.ಗಳನ್ನು ಮೇ ತಿಂಗಳಲ್ಲಿ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದೆ.