ಎರಡು ದಿನಗಳಿಂದ ಇಳಿಕೆಯಾಗಿದ್ದ ಕೊರೋನಾ ಪ್ರಕರಣ ಮತ್ತೆ ಏರಿಕೆ:3.62 ಲಕ್ಷ ಹೊಸ ಕೊವಿಡ್ ಪ್ರಕರಣ ಪತ್ತೆ

ನವದೆಹಲಿ, ಮೇ. 13: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3.62 ಲಕ್ಷ ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು, 4,120 ಮಂದಿ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದಲ್ಲಿ ಸತತ ನಾಲ್ಕನೇ ದಿನ ಕೊವಿಡ್ ಪ್ರಕರಣಗಳ ಸಂಖ್ಯೆ 50,000 ದಾಟಿದ್ದು ಕೇರಳದಲ್ಲಿ 43,000 ಮತ್ತು ತಮಿಳುನಾಡಿನಲ್ಲಿ 30,000 ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಮಾಹಿತಿ ಪ್ರಕಾರ ದೇಶದಲ್ಲಿ ಒಟ್ಟು ಕೊರೊನಾವೈರಸ್ ರೋಗಿಗಳ ಸಂಖ್ಯೆ 2,37,03,665 ಕ್ಕೇರಿದೆ . ಈವರೆಗೆ 1,97,34,823 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 37,10,525 ಆಗಿದ್ದು 2,58,317 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 17,72,14,256 ಮಂದಿಗೆ ಲಸಿಕೆ ನೀಡಲಾಗಿದೆ.

Exit mobile version