ಹೊಸದಿಲ್ಲಿ, ಮೇ. 21: ದೇಶದೆಲ್ಲೆಡೆ ತಲ್ಲಣ ಸೃಷ್ಠಿಸಿದ್ದ ಕೊರೊನಾ ಅಬ್ಬರ ತುಸು ಕಡಿಮೆಯಾದಂತೆ ಕಂಡುಬಂದಿದ್ದು, ಪ್ರತಿದಿನ ಸರಿ ಸುಮಾರು ಎರಡೂವರೆ ಲಕ್ಷ ಜನ ಸೋಂಕಿಗೆ ತುತ್ತಾಗಿದ್ದರೆ. ಕೊರೊನಾ ಸೋಂಕಿನಿಂದ ಸಾಯುತ್ತಿರುವವರ ಸಂಖ್ಯೆಯಲ್ಲಿ ಇಳಿಕೆಯಾಗಿಲ್ಲ.
ಕೊರೊನಾ ಎರಡನೇ ಅಲೆಯೂ ದೇಶದೆಲ್ಲೆಡೆ ಮಾರಕ ಕಾಯಿಲೆ ವ್ಯಾಪಕವಾಗಿ ಹರಡುತ್ತಿದ್ದು ಏಪ್ರಿಲ್ 30ರಿಂದ ದಿನವೊಂದಕ್ಕೆ 4 ಲಕ್ಷಕ್ಕೂ ಹೆಚ್ಚು ಜನರು ಕೊರೊನಾ ಸೋಂಕಿನಿಂದ ಪೀಡಿತರಾಗುತ್ತಿದ್ದರು. ಆದರೆ ಇದೀಗ ಕೊರೊನಾ ಆರ್ಭಟ ತುಸು ಕಡಿಮೆ ಕಡಿಮೆಯಾಗಿದೆ.
ದೇಶದಲ್ಲಿ ಗುರುವಾರ 2,59,591 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಇದರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,60,31,991ಕ್ಕೆ ಏರಿಕೆ ಆಗಿದೆ. ಇನ್ನೂ 4,209 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,91,331ಕ್ಕೆ ಏರಿಕೆ ಆಗಿದೆ. ಈವರೆಗೆ 2,27,12,735 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇನ್ನೂ 30,27,925 ಸಕ್ರಿಯ ಪ್ರಕರಣಗಳಿವೆ.