ಕಳೆದ ೨೪ ಗಂಟೆಯಲ್ಲಿ ಮೂರು ಲಕ್ಷ ಗಡಿ ತಲುಪಿದ ಕೊರೋನಾ ಸೋಂಕಿತರು

ದೆಹಲಿ, ಏ. 21: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,95,041 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿದ್ದು, 2,203 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ಒಟ್ಟು ಕೊರೋನಾ ರೋಗಿಗಳ ಸಂಖ್ಯೆ 1,56,16,130ಕ್ಕೇರಿದೆ. ಕಳೆದ 24 ಗಂಟೆಗಳಲ್ಲಿ 24 1,67,457 ಮಂದಿ ಚೇತರಿಸಿಕೊಂಡಿದ್ದು ಈವರೆಗೆ 1,32,76,039 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಕೊವಿಡ್​ನಿಂದ ಮೃತಪಟ್ಟವರ ಸಂಖ್ಯೆ 1,82,553 ಆಗಿದ್ದು ,ದೇಶದಲ್ಲಿ 21,57,538 ಸಕ್ರಿಯ ಪ್ರಕರಣಗಳಿವೆ. 13,01,19,310 ಮಂದಿ ಲಸಿಕೆ ಪಡೆದಿದ್ದಾರೆ.

ಭಾರತದಲ್ಲಿ ಕೊವಿಡ್ ಎರಡನೇ ಅಲೆಯ ಪರಿಣಾಮ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಯುವ ಜನರು ಮತ್ತು ಮಕ್ಕಳಿಗೂ ಸೋಂಕು ತಗಲುತ್ತಿದೆ. ಮಂಗಳವಾರ ಸಂಜೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ನಮ್ಮ ಮುಂದೆ ದೊಡ್ಡ ಸವಾಲು ಇದೆ. ಇದನ್ನು ನಾವು ಧೈರ್ಯದಿಂದ ಎದುರಿಸಬೇಕು ಎಂದು ಹೇಳಿದ್ದಾರೆ.

Exit mobile version