Visit Channel

ಕೊರೊನಾ ಸೋಂಕು ಹೆಚ್ಚಳ: ಮೆಲ್ಬರ್ನ್‌ನಲ್ಲಿ ಸೆ.2ರವರೆಗೆ ಕರ್ಫ್ಯೂ

file7h2ovxai5sh18lns37qt1629093640

ಆಸ್ಟ್ರೇಲಿಯಾ, ಆ. 16: ಕೋವಿಡ್ ಸಾಂಕ್ರಾಮಿಕದ ಡೆಲ್ಟಾ ರೂಪಾಂತರ ತಳಿಯ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾದ ಎರಡನೇ ಬಹುದೊಡ್ಡ ನಗರ ಮೆಲ್ಬರ್ನ್‌ನಲ್ಲಿ ಸೋಮವಾರದಿಂದ ಕರ್ಫ್ಯೂ ಘೋಷಿಸಲಾಗಿದೆ.

ವಾರಾಂತ್ಯದಲ್ಲಿ ರಸ್ತೆ ಬದಿ ಮತ್ತು ಪಬ್‌ಗಳಲ್ಲಿ ನಡೆದ ಸರಣಿ ಪಾರ್ಟಿಗಳು, ಮನೆಗಳಲ್ಲಿ ವಾರಾಂತ್ಯದ ಕೂಟಗಳ ಅಬ್ಬರದ ಪರಿಣಾಮವಾಗಿ ಸೋಂಕು ಉಲ್ಬಣಗೊಂಡಿದೆ. ಈ ಕಾರಣಕ್ಕಾಗಿ ನಗರದಲ್ಲಿ ದಿಢೀರನೇ ಕರ್ಫ್ಯೂ ವಿಧಿಸುವ ನಿರ್ಧಾರಕ್ಕೆ ಬರಲಾಯಿತು ಎಂದು ವಿಕ್ಟೋರಿಯಾ ರಾಜ್ಯದ ಪ್ರೀಮಿಯರ್ ಡಾನ್ ಆಂಡ್ರ್ಯೂಸ್ ತಿಳಿಸಿದ್ದಾರೆ.

ಅನೇಕ ಜನರು ಕೋವಿಡ್‌ ನಿಯಮಗಳನ್ನು ಉಲ್ಲಂಘಿಸುತ್ತಿರುವುದನ್ನು ಗಮನಿಸಿದ್ದೇವೆ. ನಿಯಮ ಪಾಲನೆ ಮಾಡದೇ, ತುಂಬಾ ಅಸಭ್ಯವಾಗಿ ನಡೆದುಕೊಳ್ಳುತ್ತಾರೆ. ಸಿಡ್ನಿ ನಗರದಲ್ಲಿ ಆದಂತೆ ಈ ನಗರದಲ್ಲೂ ಸಮಸ್ಯೆ ಉಂಟಾಗಬಾರದೆಂಬ ಕಾರಣಕ್ಕಾಗಿ ಸೆಪ್ಟೆಂಬರ್ 2 ರವರೆಗೆ ಕರ್ಫ್ಯೂವನ್ನು ವಿಸ್ತರಿಸಲಾಗುತ್ತಿದೆ ಎಂದು ಅವರು ಹೇಳಿದರು.

ನ್ಯೂ ಸೌತ್ ವೇಲ್ಸ್ ರಾಜ್ಯದಲ್ಲಿ ಲಾಕ್‌ಡೌನ್ ಘೋಷಿಸಿಲಾಗಿದ್ದು, ಅಲ್ಲಿನ 80 ಲಕ್ಷ ನಿವಾಸಿಗಳು ಮನೆಗಳಲ್ಲೇ ಬಂಧಿಯಾಗಿದ್ದಾರೆ. ಸಿಡ್ನಿಯಲ್ಲಿ ಎರಡು ತಿಂಗಳ ಹಿಂದೆಯೇ ಲಾಕ್‌ಡೌನ್ ಘೋಷಿಸಲಾಗಿದೆ.

Latest News

bsy
ರಾಜಕೀಯ

ಬಿಜೆಪಿಯ ಸಂಸದೀಯ ಮಂಡಳಿಗೆ ಯಡಿಯೂರಪ್ಪ ; ರಾಜಕೀಯವಾಗಿ ಮತ್ತಷ್ಟು ಬಲಗೊಂಡ ಬಿಎಸ್‌ವೈ

ಇನ್ನು ಸಂಸದೀಯ ಮಂಡಳಿಯಲ್ಲಿ ಉತ್ತರಪ್ರದೇಶ(UttarPradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌(Yogi Adityanath) ಅವರಿಗೆ ಸ್ಥಾನ ನೀಡಲಾಗುತ್ತದೆ ಎನ್ನಲಾಗಿತ್ತು. ಆದರೆ ಅವರಿಗೆ ಸ್ಥಾನ ಲಭಿಸಿಲ್ಲ.

bjp
ರಾಜಕೀಯ

ಡಿಕೆಶಿ ಸ್ವಾತಂತ್ರ್ಯದ ನಡಿಗೆಯ ಉದ್ದೇಶ, ಸಿದ್ದರಾಮಯ್ಯ ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ? : ಬಿಜೆಪಿ

ಸಿದ್ದರಾಮಯ್ಯ(Siddaramaiah) ಕಿರುಕುಳದಿಂದ ಸ್ವಾತಂತ್ರ್ಯ ಪಡೆಯುವುದೋ ಅಥವಾ ಕಾಂಗ್ರೆಸ್(Congress) ಹಿರಿಯ ನಾಯಕರು ಡಿಕೆಶಿ(DKS) ಸುತ್ತ ಹೆಣೆದಿರುವ ಜಾಲದಿಂದ ಸ್ವಾತಂತ್ರ್ಯ ಪಡೆಯುವುದೋ?

Ghee
ಆರೋಗ್ಯ

ತುಪ್ಪದ ಬಗ್ಗೆ ತಪ್ಪು ಕಲ್ಪನೆ ಬೇಡ! ; ತಪ್ಪದೇ ತುಪ್ಪ ಸೇವಿಸಿ, ಈ ಆರು ಪ್ರಯೋಜನಗಳನ್ನು ಪಡೆದುಕೊಳ್ಳಿ

ತುಪ್ಪವು ರೋಗನಿರೋಧಕ ಶಕ್ತಿಯನ್ನು ವೃದ್ದಿಸುತ್ತದೆ, ಮೂಳೆಯ ಆರೋಗ್ಯವನ್ನು ಉತ್ತೇಜಿಸುತ್ತದೆ, ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ.

Assam
ದೇಶ-ವಿದೇಶ

500 ರೂ. ಬೆಟ್ಟಿಂಗ್ ಸೋಲಿಗೆ ಸ್ನೇಹಿತನ ಶಿರಚ್ಛೇದ ; 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ಹೋಗಿ ಶರಣು!

ಆತನ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ 25 ಕಿ.ಮೀ ದೂರವಿರುವ ಪೊಲೀಸ್ ಠಾಣೆಗೆ(Police Station) ನಡೆದು ಶರಣಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.