ಸಿಎಂ ಯಡಿಯೂರಪ್ಪಗೆ ಕೊರೊನಾ ‌ಪಾಸಿಟಿವ್: ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲು

ಬೆಂಗಳೂರು, ಏ. 16: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಗಾವಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಬಿಎಸ್ ಯಡಿಯೂರಪ್ಪ ಅವರು ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಶುಕ್ರವಾರ ಎಂ.ಎಸ್.ರಾಮಯ್ಯ ಆಸ್ಪತ್ರೆನಲ್ಲಿ ಜನರಲ್ ಚೆಕಪ್ ಗೆ ಹೋಗಿದ್ದರು. ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಕಾರಣದಿಂದ ಮುಖ್ಯಮಂತ್ರಿಗಳನ್ನು ಮಣಿಪಾಲ್ ಆಸ್ಪತ್ರೆ ಗೆ ಶಿಪ್ಟ್ ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಜ್ವರದ ಹಿನ್ನಲೆಯಲ್ಲಿ ಇಂದು ತಪಾಸಣೆಗೆ ಒಳಪಟ್ಟಾಗ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿರುತ್ತದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯಂತೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.

ಹೀಗಾಗಿ ಕಳೆದ ಕೆಲವು ದಿನಗಳಲ್ಲಿ ಸಂಪರ್ಕಕ್ಕೆ ಬಂದಿದ್ದವರು ಕ್ವಾರಂಟೈನ್ ನಲ್ಲಿದ್ದು, ಒಮ್ಮೆ ಪರೀಕ್ಷಿಸಿಕೊಳ್ಳಿ ಎಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.

Exit mobile version