Visit Channel

ಶಾಸಕ ಜಮೀರ್ ಅಹ್ಮದ್, ಮಧು ಬಂಗಾರಪ್ಪಗೆ ಕೊರೊನಾ ಪಾಸಿಟಿವ್: ನಿನ್ನೆಯಷ್ಟೇ ಸಿದ್ದರಾಮಯ್ಯ ಭೇಟಿಯಾಗಿದ್ದ ಜಮೀರ್

madhu-bangarappa

ಬೆಂಗಳೂರು, ಏ. 22: ಶಾಸಕ ಜಮೀರ್‌ ಅಹ್ಮದ್‌ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೆ ಕೋವಿಡ್‌ ತಗುಲಿರುವುದು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಜಮೀರ್‌ ಅಹ್ಮದ್‌, ತಮಗೆ ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಿನ್ನೆ ಕೊವಿಡ್ ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಪಾಸಿಟಿವ್ ಬಂದಿರುತ್ತದೆ. ವೈದ್ಯರ ಸಲಹೆಯ ಮೇರೆಗೆ ಹೋಂ ಕ್ವಾರಂಟೈನ್‌ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಇನ್ನೂ, ಕೊರೊನಾ ಸೋಂಕು ದೃಢಪಟ್ಟಿರುವ ಜಮೀರ್ ಅಹ್ಮದ್, ನಿನ್ನೆ ಅವರು ಮಾಜಿ ಸಿ.ಎಂ. ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಹಿನ್ನೆಲೆ ಆತಂಕ ಎದುರಾಗಿದೆ.

ಆದರೆ ಜಮೀರ್ ಅಹಮದ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ, ಮಾಜಿ ಸಿಎಂ ಸಿದ್ದರಾಮಯ್ಯ, ಈ ಕುರಿತು ಟ್ವೀಟ್‌ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಶಾಸಕ ಜಮೀರ್ ಅಹ್ಮದ್ ಅವರು ಕೊರೊನಾ ಸೋಂಕಿಗೆ ಒಳಗಾದ ಸುದ್ದಿ ತಿಳಿದು ಬೇಸರವಾಯಿತು. ಆದಷ್ಟು ಶೀಘ್ರ ಅವರು ಗುಣಮುಖರಾಗಿ ಜನ ಸೇವೆಗೆ ಮರಳಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಅಂತೆಯೇ, ಮಾಜಿ ಶಾಸಕ ಮಧು ಬಂಗಾರಪ್ಪ ಅವರಿಗೂ ಕೊರೊನಾ ಸೋಂಕು ತಗಲಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಜಮೀರ್ ಅಹ್ಮದ್, ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೆಲ ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಿʼ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.

Latest News

China Ship
ದೇಶ-ವಿದೇಶ

ಶ್ರೀಲಂಕಾ ಬಂದರಿನಲ್ಲಿ ಚೀನಾದ ಹಡಗು ; ಭಾರತದ ಕಳವಳಕ್ಕೆ 5 ಕಾರಣಗಳು ಇಲ್ಲಿವೆ!

ಮೊದಲಿನಿಂದಲೂ ಈ ಹಡಗು ಶ್ರೀಲಂಕಾ ಬಂದರಿಗೆ ಬರುವುದನ್ನು ಭಾರತ ತೀವ್ರವಾಗಿ ವಿರೋಧಿಸಿತ್ತು. ಭಾರತದ ಕಳವಳಕ್ಕೆ ಪ್ರಮುಖ 5 ಕಾರಣಗಳೆಂದರೆ,

bjp
ರಾಜಕೀಯ

ಕಾಂಗ್ರೆಸ್ಸಿಗರಿಗೇಕೆ ಜಿಹಾದಿಗಳ ಮೇಲೆ ಇಷ್ಟೊಂದು ಪ್ರೀತಿ? : ಬಿಜೆಪಿ ಪ್ರಶ್ನೆ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಕ್ಕೆ ಮಸಿ ಬಳಿಯಲು ಯತ್ನಿಸಿದ ದುಷ್ಟ ಶಕ್ತಿಗಳನ್ನು ಮಟ್ಟ ಹಾಕಲಾಗಿದೆ ಎಂದು ಬಿಜೆಪಿ ತಿಳಿಸಿದೆ.

Pingali
ಮಾಹಿತಿ

ನಮ್ಮ ರಾಷ್ಟ್ರಧ್ವಜವನ್ನು ನಿರ್ಮಿಸಿದ ಪಿಂಗಳಿ ವೆಂಕಯ್ಯ, ಮೊದಲು ಬ್ರಿಟಿಷ್ ಸೈನ್ಯದಲ್ಲಿದ್ದರು ; ಇಲ್ಲಿದೆ ಓದಿ ಅಚ್ಚರಿಯ ಮಾಹಿತಿ

ದೇಶಕ್ಕೊಂದು ಧ್ವಜಕೊಟ್ಟು 100 ವರ್ಷ ಕಳೆದರೂ ಪಿಂಗಳಿ ಅವರ ನೆನಪು ಅಜರಾಮರವಾಗಿದೆ. ಪಿಂಗಳಿ ವೆಂಕಯ್ಯ ಅವರ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಮುಂದೆ ಓದಿ.