Bengaluru : ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದೆ. ಆದಾಗ್ಯೂ, ಇತರ (cost of sowing seeds is low) ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ

ಬಿತ್ತನೆ ಬೀಜಗಳ ದರ ಕಡಿಮೆ ಇದೆ. ಮಹಾರಾಷ್ಟ್ರದಲ್ಲಿ (MAHARASHTRA) ಸೋಯಾ (SOYA) ಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಎಲ್-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ
ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ. 25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ.
ಹೆಸರು ಮತ್ತು ಜೋಳದ (CORN) ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ (MAHARASHTRA) ಕ್ರಮವಾಗಿ ರೂ.23,500/- ರೂ. 14,000/- ಇದ್ದು ಕರ್ನಾಟಕದಲ್ಲಿ ಕ್ರಮವಾಗಿ
ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇದೆ ಉಳಿದೆಡೆಯಲ್ಲಿ
ಹೋಲಿಸಿದರೆ ನಮ್ಮ ರಾಜ್ಯದಲ್ಲಿಯೇ ಕಡಿಮೆಯಿದೆ ಎಂದು ಮುಖ್ಯಮಂತ್ರಿ (cost of sowing seeds is low) ಸಿದ್ಧರಾಮಯ್ಯನವರು (SIDDARAMAIAH) ಹೇಳಿದ್ದಾರೆ.
ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., (Karnataka State Seed Corporation) ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ
ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು
ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು
ವಾಸ್ತವ ಸ್ಥಿತಿಯನ್ನು ವಿವರಿಸಿರುವುದಾಗಿ ಮುಖ್ಯಮಂತ್ರಿ (CHIEF MINISTER) ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ: ಬಿತ್ತನೆ ಬೀಜ ದರ ಶೇ.60-70ರಷ್ಟು ಏರಿಕೆ: ಕೃಷಿ ಸಚಿವರೇ ಎಲ್ಲಿದ್ದಿರಪ್ಪ? ಜೆಡಿಎಸ್ ವಾಗ್ದಾಳಿ