Bengaluru: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್‌ವೆಸ್ಟ್ ಕರ್ನಾಟಕಕ್ಕೆ (Invest Karnataka) ರಾಜ್ಯ ಸರ್ಕಾರ ಸಜ್ಜಾಗಿದೆ. ಸಮಾವೇಶಕ್ಕೆ ಸಂಜೆ ಭರ್ಜರಿ ಚಾಲನೆ ಸಿಗಲಿದೆ. ನಾಳೆಯಿಂದ ಮೂರು ದಿನಗಳ ಕಾಲ ನಡೆಯಲಿರುವ ಸಮಾವೇಶಕ್ಕೆ ಬೆಂಗಳೂರಿನ ಅರಮನೆ (Bangalore Palace) ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.ಜಾಗತೀಕರಣ (Globalization) ಬೆಳವಣಿಗೆ ಹೆಚ್ಚು ಹೂಡಿಗೆ ಅಗತ್ಯ. ಇನ್ನೂ ಹೊಸ ಕೈಗಾರಿಕಾ ನೀತಿಯ ಅನ್ವಯ 20 ಲಕ್ಷ ಉದ್ಯೋಗವಕಾಶ ನಿರ್ಮಿಸುವ ಗುರಿ ಹೊಂದಿರುವ ಬಗ್ಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ (CM Siddaramaiah) ಅಭಿಪ್ರಾಯ ಹಂಚಿಕೊಂಡಿದ್ದಾರೆ.

ಇಂದು ಸಂಜೆ 4 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Union Defense Minister Rajnath Singh) ಉದ್ಘಾಟನೆ ನೆರವೇರಿಸಲಿದ್ದಾರೆ. ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ (Governor Thawarchand Gehlot) ಘನ ಉಪಸ್ಥಿತಿಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ಸಹ ಪಾಲ್ಗೊಳ್ಳಲಿದ್ದಾರೆ.ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಮುನ್ನುಡಿ ಬರೆದದ್ದೇ ಕರ್ನಾಟಕ. ಇದನ್ನು ಗಮನಿಸಿದ ಅನ್ಯ ರಾಜ್ಯಗಳು ಇದೀಗ ಈ ಕಾರ್ಯಕ್ರಮವನ್ನೇ ಅನುಕರಣೆ ಮಾಡುತ್ತಿವೆ. ಎಲ್ಲ ರೀತಿಯಲ್ಲಿಯೂ ಕರ್ನಾಟಕ ಪ್ರಜ್ವಲಿಸಲಿದೆ. ಈ ಇನ್ವೆಸ್ಟ್ ಕರ್ನಾಟಕ 2025ರ ಸಮಾವೇಶ ಉದ್ಯೋಗ ಸೃಷ್ಟಿ ಸೇರಿದಂತೆ ಉತ್ಪಾದನೆಗೆ ಅನುಕೂಲಕರವಾದ ವಾತಾವರಣ ನಿರ್ಮಾಣ ಮಾಡಲಿದೆ ಎನ್ನುವ ವಿಶ್ವಾಸದಲ್ಲಿ ಸರ್ಕಾರವಿದೆ.
ಸಮಾವೇಶದಲ್ಲಿ 19 ದೇಶಗಳ ಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ರಾಜ್ಯದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ (Economic and industrial growth) ನಿರ್ಣಾಯಕ ಕೊಡುಗೆ ನೀಡುತ್ತಿರುವ 14 ಉದ್ಯಮಗಳನ್ನು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಇದೇ ಮೊದಲ ಬಾರಿಗೆ ಗುರುತಿಸಿ, ಪುರಸ್ಕರಿಸಲಾಗುತ್ತಿದೆ. ಈ ಕಾರ್ಯಕ್ರಮ ಫೆ.12ರ ಸಂಜೆ ನಡೆಯಲಿದೆ. ಇವುಗಳಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣೆ, ಆಟೋ ಇ.ವಿ., ಜೈವಿಕ ತಂತ್ರಜ್ಞಾನ (Biotechnology) ಮತ್ತು ಜೀವವಿಜ್ಞಾನ ವಲಯಗಳ (Biological Zones) ಸಾಧಕ ಉದ್ಯಮಗಳು ಇರಲಿವೆ. ಈವರೆಗೆ ನಡೆದ ಇನ್ವೆಸ್ಟ್ ಕರ್ನಾಟಕದಲ್ಲಿ 7 ಲಕ್ಷ ಕೋಟಿ ರೂ.ವರೆಗೆ ಮಾತ್ರ ಹೂಡಿಕೆ ಮಾಡಲಾಗಿದೆ. ಆದರೆ ಈ ಬಾರೀ 10 ಲಕ್ಷ ಕೋಟಿ ರೂಪಾಯಿಗೂ ಹೂಡಿಕೆಯಾಗುವ ನಿರೀಕ್ಷೆಯಿದೆ.