ಬೆಂಗಳೂರು, ಮಾ. 08: ರಾಜ್ಯ ಬಜೆಟ್‌ಗೆ ಕ್ಷಣಗಣನೆ ಶುರುವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಂಡಿಸಲಿರುವ ಬಜೆಟ್ ಮೇಲೆ ರಾಜ್ಯದ ಜನತೆ ಭಾರೀ ನಿರೀಕ್ಷೆ ಹೊಂದಿದ್ದಾರೆ.
ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಶೇಷಾದ್ರಿಪುರಂನಲ್ಲಿರುವ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಮಠಕ್ಕೆ ಆಗಮಿಸಿ ವಿಶೇಷ ಪೂಜೆ-ಪ್ರಾರ್ಥನೆಗಳನ್ನು ಸಲ್ಲಿಸಿದರು.
ಇದಕ್ಕೂ ಮುನ್ನ, ಇಂದು ಅಧಿವೇಶನದಲ್ಲಿ 2021-22ನೇ ಸಾಲಿನ ಆಯವ್ಯಯ ಪತ್ರ ಮಂಡಿಸಲಿರುವ ಹಿನ್ನೆಲೆಯಲ್ಲಿ ಮುಂಜಾನೆ ಎಂದಿನಂತೆ ದೇವರಿಗೆ ಪೂಜೆ ಸಲ್ಲಿಸಿ, ಬಜೆಟ್ ಮಂಡನೆ ಹಿನ್ನಲೆಯಲ್ಲಿ ಆಶೀರ್ವಾದವನ್ನು ಕೋರಿ, ರಾಜ್ಯದ ಸಮಸ್ತ ಜನತೆಯ ಏಳಿಗೆಗಾಗಿ ಪ್ರಾರ್ಥಿಸಿದರು. ಈ ನಡುವೆ ಮಹಿಳಾ ದಿನಾಚರಣೆ ದಿನದಂದು ಬಜೆಟ್ ಮಂಡನೆ ಮಾಡುತ್ತಿರುವ ಕಾರಣದಿಂದ ಸಚಿವೆ ಶಶಿಕಲಾ ಜೊಲ್ಲೆ ಸೇರಿ ಹಲವು ಮಹಿಳಾ ಪ್ರಮುಖರು ಮುಖ್ಯಮಂತ್ರಿಗಳಿಗೆ ಶುಭ ಕೋರಿದರು.