ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ 10 ಸಾವಿರ ದಂಡ: ಜನಪ್ರತಿನಿಧಿಗಳ ಕೋರ್ಟ್ ಮಹತ್ವದ ಆದೇಶ

Bengaluru: ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (Court Order for Siddaramaiah)

ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರಿಗೆ ರಾಜ್ಯ ಹೈಕೋರ್ಟ್ನ ಜನಪ್ರತಿನಿಧಿ ನ್ಯಾಯಾಲಯ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಇದೇ ವೇಳೆ ಮುಖ್ಯಮಂತ್ರಿ

ಸಿದ್ದರಾಮಯ್ಯನವರಿಗೆ ಮಾರ್ಚ್ 6ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ (Court Order for Siddaramaiah) ಸಮನ್ಸ್ ಕೂಡಾ ನೀಡಿದೆ.

ಏನಿದು ಪ್ರಕರಣ..? :
2022ರ ಏಪ್ರಿಲ್ (April) 14ರಂದು ಬೆಂಗಳೂರಿನ ರೇಸ್ ವ್ಯೂ ಹೋಟೆಲ್ ಬಳಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ

ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ರೇಸ್ಕೋರ್ಸ್ (Racecourse) ರಸ್ತೆಯಲ್ಲಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ಬೆಂಗಳೂರು ನಗರ ಪೊಲೀಸರಿಂದ ಯಾವುದೇ

ಅನುಮತಿ ಪಡದಿರಲಿಲ್ಲ. ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಅಂದು ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ,

ರಣದೀಪ್ ಸುರ್ಜೆವಾಲಾ, ಡಿಕೆ ಶಿವಕುಮಾರ್ (D K Shivakumar) ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು. ಬೆಂಗಳೂರು ನಗರದಲ್ಲಿ

ಅನುಮತಿ ಇಲ್ಲದೇ, ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್ನಲ್ಲಿ (Freedom Park) ಪ್ರತಿಭಟಿಸಲು ಅವಕಾಶ

ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದರೆ ಪ್ರಕರಣ ದಾಖಲಿಸಲಾಗುತ್ತದೆ. ಹೀಗಾಗಿ ಇದೀಗ ರಾಜ್ಯ ಹೈಕೋರ್ಟ್ನ (High court)

ಜನಪ್ರತಿನಿಧಿ ನ್ಯಾಯಾಲಯ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

Exit mobile version