ರಾಜ್ಯಾದ್ಯಂತ 400ಕ್ಕೂ ಹೆಚ್ಚು ಗ್ರಾಮಗಳಲ್ಲಿ ನ್ಯಾಯಾಲಯಗಳ ಸ್ಥಾಪನೆ: ಕರ್ನಾಟಕ ಸರ್ಕಾರ ಚಿಂತನೆ

Bengaluru: ಕರ್ನಾಟಕದಾದ್ಯಂತ (Karnataka) 400 ಅಥವಾ ಅದಕ್ಕಿಂತ ಹೆಚ್ಚಿನ ಗ್ರಾಮ ಪಂಚಾಯಿತಿಗಳಲ್ಲಿ ಜನರಿಗೆ ನ್ಯಾಯವನ್ನು ಒದಗಿಸುವ ಕಾರಣದಿಂದ ಗ್ರಾಮ ನ್ಯಾಯಾಲಯಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯನ್ನು ಸಚಿವ ಸಂಪುಟವು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ಇದು ಜನರಿಗೆ ನ್ಯಾಯವನ್ನು ಒದಗಿಸುವ ಸ್ಪಷ್ಟ ಹೆಜ್ಜೆಯಾಗಿದ್ದು, ಸ್ಥಳೀಯ ವಿವಾದಗಳು ಮತ್ತು ಕಾನೂನು ಸಮಸ್ಯೆಗಳನ್ನು ಸ್ಥಳೀಯವಾಗಿ ಪರಿಹರಿಸಬೇಕು ಎಂದು ಇದರ ಚಿಂತನೆಯಾಗಿದೆ. ಸುಮಾರು 100 ಕೋಟಿ ವೆಚ್ಚ ತಗಲುವ ಅಂದಾಜು ಹಾಕಲಾಗಿದೆ.

ಗ್ರಾಮಗಳಲ್ಲಿ ಜನರಿಗೆ ನ್ಯಾಯ ದೊರಕಿಸಲು ಅಧಿಕಾರಿ ವರ್ಗದ ಮುಖ್ಯ ಕಾರ್ಯದರ್ಶಿ, ಕಾನೂನು ಕಾರ್ಯದರ್ಶಿ, ಕಂದಾಯ ಕಾರ್ಯದರ್ಶಿ ಮತ್ತು ಇತರ ಪಾಲುದಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಸಭೆ ನಡೆಸಿದ್ದಾರೆ. 8,000ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿದ್ದು, ಪ್ರತಿ ಗ್ರಾಮಕ್ಕೆ ನ್ಯಾಯಾಲಯ ಬರಲು ವರ್ಷಗಳೇ ಬೇಕಾಗಬಹುದು

ದೇಶದಾದ್ಯಂತ ಗ್ರಾಮಗಳಲ್ಲಿ ಗ್ರಾಮ ನ್ಯಾಯಾಲಯಗಳನ್ನು ತೆಗೆದುಕೊಳ್ಳಲು ಪ್ರಸ್ತಾಪಿಸಲಾಯಿತು ಮತ್ತು ಕರ್ನಾಟಕವು ಪ್ರಾಯೋಗಿಕ ಯೋಜನೆಯಾಗಿ ಎರಡು ನ್ಯಾಯಾಲಯಗಳನ್ನು ಪ್ರಾರಂಭಿಸಿತು. ಅದು ಇನ್ನೂ ಕಾರ್ಯನಿರ್ವಹಿಸುತ್ತಿದೆ.

ಕೇಂದ್ರ ಸರ್ಕಾರವು ಗ್ರಾಮ ನ್ಯಾಯಾಲಯಗಳನ್ನು ಪ್ರೋತ್ಸಾಹಿಸಿದ್ದು, ಒಂದು ನೀತಿ ವಿಷಯವಾಗಿದೆ. ಇದನ್ನು ಪ್ರಥಮ ದರ್ಜೆಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (Magistrate) ನ್ಯಾಯಾಲಯವೆಂದು ಪರಿಗಣಿಸಲಾಗುತ್ತದೆ. ಸಣ್ಣ ವಿವಾದಗಳನ್ನು ಇತ್ಯರ್ಥಗೊಳಿಸಲು ಕ್ರಿಮಿನಲ್ (Criminal) ಮತ್ತು ಸಿವಿಲ್ ನ್ಯಾಯ ವ್ಯಾಪ್ತಿಗಳನ್ನು ಹೊಂದಿದೆ.

ಗ್ರಾಮ ನ್ಯಾಯಾಲಯಗಳನ್ನು ಹಲವು ರಾಜ್ಯಗಳಲ್ಲಿ ಪ್ರಾರಂಭಿಸಲಾಗಿದ್ದು, 10 ರಾಜ್ಯಗಳಲ್ಲಿ 257 ನ್ಯಾಯಾಲಯಗಳು ಕಾರ್ಯನಿರ್ವಹಿಸುತ್ತಿವೆ. ಮಧ್ಯಪ್ರದೇಶ 89 ಗ್ರಾಮ ನ್ಯಾಯಾಲಯಗಳನ್ನು ಹೊಂದಿದ್ದು, ರಾಜಸ್ಥಾನ 45, ಉತ್ತರ ಪ್ರದೇಶ 44, ಕೇರಳ 30, ಮಹಾರಾಷ್ಟ್ರ 23 ಮತ್ತು ಒಡಿಶಾ 19 ಇಂತಹ ನ್ಯಾಯಾಲಯಗಳನ್ನು ಹೊಂದಿದೆ.

ನ್ಯಾಯಾಲಯಗಳ ಸ್ಥಾಪನೆಗೆ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ ನಂತರ ಕೆಲವು ತಿಂಗಳುಗಳು ಬೇಕಾಗಬಹುದು ಎಂದು ಮೂಲಗಳು ತಿಳಿಸಿದ್ದು, 400 ಗ್ರಾಮ ನ್ಯಾಯಲಯಗಳು ಕಾರ್ಯರೂಪಕ್ಕೆ ಬಂದ ನಂತರ ಕರ್ನಾಟಕವು ದೇಶದಾದ್ಯಂತ ಅತಿ ಹೆಚ್ಚು ಗ್ರಾಮ ನ್ಯಾಯಾಲಯಗಳನ್ನು ಹೊಂದಿರುವ ರಾಜ್ಯವಾಗಿ ಹೊರಹೊಮ್ಮಲಿದೆ.

ಭವ್ಯಶ್ರೀ ಆರ್.ಜೆ

Exit mobile version