ಏಪ್ರಿಲ್ 10 ರಿಂದ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಬೂಸ್ಟರ್ ಡೋಸ್ ಲಭ್ಯ!

covid 19

ಖಾಸಗಿ(Private) ಆಸ್ಪತ್ರೆಗಳಲ್ಲಿ(Hospital) ಏಪ್ರಿಲ್(April) 10 ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19(Covid-19) ಬೂಸ್ಟರ್ ಡೋಸ್(Booster Dose) ಲಭ್ಯವಿರುತ್ತದೆ ಎಂದು ಕೇಂದ್ರವು ಶುಕ್ರವಾರ ಮಾಹಿತಿಯಲ್ಲಿ ಪ್ರಕಟಿಸಿದೆ. ಮೊದಲ ಮತ್ತು ಎರಡನೇ ಡೋಸ್‌ಗಳಿಗೆ ಸರ್ಕಾರಿ ಲಸಿಕೆ ಕೇಂದ್ರಗಳ ಮೂಲಕ ನಡೆಯುತ್ತಿರುವ ಉಚಿತ(Free) ಲಸಿಕೆ ಕಾರ್ಯಕ್ರಮ ಮತ್ತು ಬೂಸ್ಟರ್ ಡೋಸ್ ಕೂಡ ಜೊತೆಯಲ್ಲೇ ಮುಂದುವರಿಯುತ್ತದೆ.

18 ಅಥವಾ ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಮತ್ತು ಎರಡನೇ ಡೋಸ್ ಪಡೆದ ನಂತರ, ಒಂಬತ್ತು ತಿಂಗಳುಗಳನ್ನು ಪೂರ್ಣಗೊಳಿಸಿದ ಎಲ್ಲರೂ ಬೂಸ್ಟರ್ ಡೋಸ್‌ಗೆ ಅರ್ಹರಾಗಿದ್ದಾರೆ. ಭಾನುವಾರದಿಂದ ಎಲ್ಲ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಈ ಸೌಲಭ್ಯ ಲಭ್ಯವಾಗಲಿದೆ ಎಂದು ತಿಳಿಸಿದೆ. ಇಲ್ಲಿಯವರೆಗೆ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕೆಲಸಗಾರರು ಮತ್ತು 60ಕ್ಕೂ ಅಧಿಕ ಜನಸಂಖ್ಯೆಯ ಗುಂಪಿಗೆ 2.4 ಕೋಟಿಗೂ ಹೆಚ್ಚು ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗಿದೆ.

ದೇಶದ ಎಲ್ಲಾ 15ಕ್ಕೂ ಹೆಚ್ಚು ಜನಸಂಖ್ಯೆಯಲ್ಲಿ ಸುಮಾರು 96% ಜನರು ಕನಿಷ್ಠ ಒಂದು ಕೋವಿಡ್ ಲಸಿಕೆ ಡೋಸ್ ಅನ್ನು ಪಡೆದಿದ್ದಾರೆ. ಆದರೆ 15ಕ್ಕೂ ಅಧಿಕ ಜನಸಂಖ್ಯೆಯಲ್ಲಿ ಸುಮಾರು 83% ಜನರು ಎರಡೂ ಡೋಸ್‌ಗಳನ್ನು ಸ್ವೀಕರಿಸಿದ್ದಾರೆ. ಏಪ್ರಿಲ್ 6 ರಂದು, ಮುಂಬೈನ ನಾಗರಿಕ ಸಂಸ್ಥೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ನಗರದಲ್ಲಿ ಹೊಸ XE ರೂಪಾಂತರದ ಕರೋನವೈರಸ್ ಪ್ರಕರಣ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಆದಾಗ್ಯೂ, ಕೇಂದ್ರ ಆರೋಗ್ಯ ಸಚಿವಾಲಯದ ನಿಕಟ ಮೂಲಗಳು ರೋಗಿಯ ಮಾದರಿಯ ಜೀನೋಮ್ ಅನುಕ್ರಮವು XE ರೂಪಾಂತರದ ಉಪಸ್ಥಿತಿಯನ್ನು ಸೂಚಿಸುವುದಿಲ್ಲ ಎಂದು ಹೇಳಿದೆ. BMC ಪ್ರಕಾರ, ಇದು XE ರೂಪಾಂತರದ ಮೊದಲ ಪ್ರಕರಣವಾಗಿದೆ. ಆದ್ರೆ ಹೊಸ ರೂಪಾಂತರವನ್ನು ಖಚಿತಪಡಿಸಲು ಹೆಚ್ಚಿನ ವಿಶ್ಲೇಷಣೆಗಾಗಿ ಮಾದರಿಯನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬಯೋಮೆಡಿಕಲ್ ಜೀನೋಮಿಕ್ಸ್ (NIBMG) ಗೆ ಕಳುಹಿಸಲಾಗುತ್ತದೆ.

ಕೋವಿಡ್ ವ್ಯಾಕ್ಸಿನೇಷನ್ ಸೋಂಕಿನ ತೀವ್ರತೆಯನ್ನು ಕಡಿಮೆ ಮಾಡುತ್ತದೆಯಾದರೂ, ಕಾಲಾನಂತರದಲ್ಲಿ, ವಿಶೇಷವಾಗಿ 65 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಜನರಲ್ಲಿ ವ್ಯಾಕ್ಸಿನೇಷನ್ ಕಡಿಮೆ ಪರಿಣಾಮಕಾರಿಯಾಗುತ್ತದೆ ಎಂದು ವಿವಿಧ ವರದಿಗಳು ತಿಳಿಸಿವೆ. ಚೀನಾ ಮತ್ತು ಪ್ರಪಂಚದ ಇತರ ಭಾಗಗಳಲ್ಲಿ ಕರೋನ ವೈರಸ್‌ನ ಹೆಚ್ಚು ಸಾಂಕ್ರಾಮಿಕ ಒಮಿಕ್ರಾನ್ ರೂಪಾಂತರದ ಹೊರಹೊಮ್ಮುವಿಕೆಯೊಂದಿಗೆ, ಸಂಪೂರ್ಣವಾಗಿ ಲಸಿಕೆಯನ್ನು ಪಡೆದ ಜನರು ಮತ್ತೆ ಸೋಂಕಿಗೆ ಒಳಗಾಗುವ ಅಪಾಯವನ್ನು ಹೊಂದಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

Exit mobile version