Belagavi : ಆರ್ಥಿಕತೆಯ ಮೇಲೆ ಪರಿಣಾಮ ಬೀರದಂತೆ ಕೋವಿಡ್ -19 (Covid-19 precaution) ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಮುನ್ನೆಚ್ಚರಿಕೆ ಮತ್ತು, ತಡೆಗಟ್ಟುವ ಕ್ರಮಗಳನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯ(Belagavi) ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಕೋವಿಡ್-19 (Covid-19 precaution) ಸಾಂಕ್ರಾಮಿಕ ರೋಗದ ಬಗ್ಗೆ ಚರ್ಚಿಸಲಾಗಿದೆ.
ಬೂಸ್ಟರ್ ಡೋಸ್(Booster dose) ಲಕ್ಷಣ ಕಂಡು ಬಂದರೆ ಕಡ್ಡಾಯ ಪರೀಕ್ಷೆ, ಹಾಗೂ ವಿದೇಶದಿಂದ ಆಗಮಿಸುವವರಿಗೂ ಕೂಡ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುವುದು.
ಸಾರ್ವಜನಿಕವಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಸೇರಿದಂತೆ ಹಲವು ಕ್ರಮಗಳನ್ನು ಹಂತ ಹಂತವಾಗಿ ಜಾರಿಗೊಳಿಸಲು ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಚರ್ಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಹೊಸ ವರ್ಷಾಚರಣೆಗೆ ಪ್ರತ್ಯೇಕ ಮಾರ್ಗಸೂಚಿಗಳ ಕುರಿತು ಕೇಳಿದಾಗ, ಈ ವರ್ಷವೂ ಕೆಲವು ನಿಯಮಗಳಿವೆ ಎಂದು ಹೇಳಿದ ಅವರು,
ಇದನ್ನೂ ಓದಿ : https://vijayatimes.com/kranti-release-on-january-26/
ಹೊಸ ವರ್ಷಾಚರಣೆಗೂ ಮುನ್ನ ಕರ್ನಾಟಕ(Covid-19 precaution) ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ. ಹಿಂದಿನ ವರ್ಷಗಳಂತೆಯೇ, ಈ ವರ್ಷವೂ ಕೆಲವು ನಿರ್ಬಂಧಗಳಿವೆ.
ಕೋವಿಡ್ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ, ಅಸ್ತಿತ್ವದಲ್ಲಿರುವ ಮಾರ್ಗಸೂಚಿಗಳಿಗೆ ಇನ್ನೂ ಕೆಲವು ಅಂಶಗಳನ್ನು ಸೇರಿಸಲಾಗುತ್ತದೆ.
ಆದಾಗ್ಯೂ, ದಿನನಿತ್ಯದ ವ್ಯವಹಾರಗಳ ಮೇಲೆ ಪರಿಣಾಮ ಬೀರದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಹಂತ ಹಂತವಾಗಿ ಜಾರಿಗೊಳಿಸಲಾಗುವುದು ಎಂದು ಬೊಮ್ಮಾಯಿ ಹೇಳಿದರು.
ಇದೇ ವೇಳೆ ಬೆಳಗಾವಿ ಅಧಿವೇಶನದ ಕುರಿತು ಪ್ರತಿಕ್ರಿಯಿಸಿದ ಅವರು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಬಹಳ ದಿನಗಳಿಂದ ಬಾಕಿ ಉಳಿದಿವೆ.

ಪ್ರಸ್ತುತ ನಡೆಯುತ್ತಿರುವ ಬೆಳಗಾವಿ ಅಧಿವೇಶನ ಫಲಪ್ರದ ಮತ್ತು ಅರ್ಥಪೂರ್ಣವಾಗಿರಬೇಕೆಂದು ಸರ್ಕಾರ(Government) ಬಯಸುತ್ತದೆ. ಉತ್ತರ ಕರ್ನಾಟಕ(Uttar Karnataka) ಭಾಗಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಬೇಕು ಎಂದು ಅವರು ಹೇಳಿದರು.
- ಮಹೇಶ್.ಪಿ.ಎಚ್