ಇಂದೋರ್, ಮೇ. 12: ದೇಶದಲ್ಲಿ ಕೊರೋನಾ ಹೆಚ್ಚುತ್ತಿರುವ ನಡುವೆ ಕೆಲವು ನಾಯಕರು ವಿವಾದಾತ್ಮಕ ಹೇಳಿಕೆಯನ್ನು ನೀಡುವ ಮೂಲಕ ಸುದ್ದಿಯಾಗುತ್ತಿದ್ದಾರೆ. ಇದೀಗ ಮಧ್ಯಪ್ರದೇಶ ಸಚಿವೆ ಉಷಾ ಠಾಕೂರ್ ಮತ್ತೊಂದು ಸಲಹೆ ನೀಡಿ ಸುದ್ದಿಯಾಗಿದ್ದಾರೆ.
ಭಾರತದಲ್ಲಿ ಕೊರೋನಾ ಎರಡನೇ ಅಲೆ ಹಲವು ಸಮಸ್ಯೆ ಸೃಷ್ಟಿಸಿದೆ. ಆದರೆ ಇನ್ನು ನಾಲ್ಕು ದಿನಗಳ ಕಾಲ ‘ಯಜ್ಞ, ಚಿಕಿತ್ಸೆ ನಡೆಸಿದರೆ ಕೋವಿಡ್ 19 ಮೂರನೇ ಅಲೆ ಭಾರತವನ್ನು ತಲುಪಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಇಂದೋರ್ನಲ್ಲಿ ಕೋವಿಡ್ ಆರೈಕೆ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪರಿಸರ ಶುದ್ಧೀಕರಣಕ್ಕಾಗಿ, ನಾಲ್ಕು ದಿನ ಯಜ್ಞವನ್ನು ಮಾಡಿ. ಇದನ್ನು ಯಜ್ಞ ಚಿಕಿತ್ಸೆ ಎನ್ನುತ್ತಾರೆ, ಹಿಂದೆ , ನಮ್ಮ ಪೂರ್ವಜರು ಸಾಂಕ್ರಾಮಿಕ ರೋಗಗಳನ್ನು ತೊಡೆದುಹಾಕಲು ಯಜ್ಞ ಚಿಕಿತ್ಸೆ ಮಾಡುತ್ತಿದ್ದರು. ಇದನ್ನು ಮಾಡುವುದರಿಂದ ಕೋವಿಡ್ ಮೂರನೇ ಅಲೆ ಭಾರತವನ್ನು ಮುಟ್ಟುವುದಿಲ್ಲ ಎಂದು ಹೇಳಿದ್ದಾರೆ.