ಬೆಂಗಳೂರು ಡಿ 27 : ಕೇಂದ್ರ ಸರ್ಕಾರವು ದೇಶಾದ್ಯಾಂತ 15 ರೊಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವುದಾಗಿ ಘೋಷಿಸಿತ್ತು ಆದರೆ ರಾಜ್ಯದಲ್ಲಿ ಯಾವ ರೀತಿಯಲ್ಲಿ ಲಸಿಕೆ ಪೂರೈಕೆ ಮಾಡಬೇಕೆಂದ ಇದ್ದ ಗೊಂದಲಕ್ಕೆ ತೆರೆ ಎಳೆದಿರುವ ರಾಜ್ಯ ಸರ್ಕಾರ ಲಸಿಕೆಯನ್ನು ಆಯಾ ಶಾಲೆಗಳಲ್ಲಿ ನೀಡುವುದಾಗಿ ಘೋಷಿಸಿದೆ. ಇತ್ತ ಜನವರಿ 1, 2022ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ( Children in the age group of 15-18 years ) ಲಸಿಕೆ ( Corona Vaccine ) ನೀಡುವ ಸಂಬಂಧ ಕೋವಿನ್ ಆ್ಯಪ್ ನಲ್ಲಿ ( CoWIN app ) ನೋಂದಣಿ ಆರಂಭಗೊಳ್ಳಲಿದೆ. ಈ ಮೂಲಕ ಮಕ್ಕಳ ಪೋಷಕರು ಜನವರಿ 1 ರಿಂದ ಕೋವಿನ್ ಆ್ಯಪ್ ನಲ್ಲಿ ನೋಂದಾಯಿಸಿಕೊಳ್ಳಬಹುದು.
ಈ ಬಗ್ಗೆ ಮಾಹಿತಿ ನೀಡಿರುವಂತ ಕೋವಿನ್ ಪ್ಲಾಟ್ ಫಾರ್ಮ್ ಮುಖ್ಯಸ್ಥ ಡಾ.ಆರ್.ಎಸ್ ಶರ್ಮಾ ಅವರು, 15-18 ವರ್ಷ ವಯಸ್ಸಿನ ಮಕ್ಕಳು ಜನವರಿ 1 ರಿಂದ ಕೋವಿನ್ ಆ್ಯಪ್ ನಲ್ಲಿ ನೋಂದಾಯಿಸಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಶಾಲಾ ಗುರುತಿನ ಚೀಟಿಯೊಂದಿಗೆ ನೋಂದಣಿ ಮಾಡಬಹುದಾಗಿದೆ. ಇಲ್ಲವೇ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆಯೂ ನೋಂದಣಿ ಮಾಡಬಹುದಾಗಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಆಯಾ ಶಾಲೆಗಳಲ್ಲಿ ಲಸಿಕೆ ನೀಡುವ ಕುರಿತಂತೆ ಲಸಿಕಾ ಅಭಿಯಾನಗಳನ್ನು ಸಿದ್ಧಪಡಿಸುತ್ತಿದ್ದೇವೆ. 60 ವರ್ಷ ಮೇಲ್ಪಟ್ಟವರಿಗೆ ಸಹ-ಅಸ್ವಸ್ಥತೆ ಹೊಂದಿರುವವರಿಗೆ ‘ಮುನ್ನೆಚ್ಚರಿಕೆ ಡೋಸ್’ ನೀಡಲು ಸಿದ್ಧತೆ ನಡೆಸಲು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಶಾಲೆಗಳಲ್ಲಿ ಲಸಿಕೆ ಅಭಿಯಾನ ಜನವರಿ 3 ರಿಂದ ಪ್ರಾರಂಭವಾಗಲಿದ್ದು, ಜನವರಿ 10 ರಿಂದ 60 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ ಸಹ-ಅಸ್ವಸ್ಥತೆಹೊಂದಿರುವ ಅರ್ಹರಿಗೆ ಇನ್ನೋಕ್ಯುಲೇಷನ್ ಶಿಬಿರಗಳು ಕೇಂದ್ರದ ನಿರ್ದೇಶನದಂತೆ ಪ್ರಾರಂಭವಾಗುತ್ತವೆ ಎಂದು ಹೇಳಿದರು.