ಕೋವಿಡ್ ಹಿನ್ನೆಲೆ: ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ ನೀಡಿ: ಪ್ರಧಾನಿಗೆ ಸೋನಿಯಾ ಗಾಂಧಿ ಪತ್ರ

ಹೊಸದಿಲ್ಲಿ, ಮೇ. 21: ಕೋವಿಡ್‌ನಿಂದ ತಂದೆ–ತಾಯಿ ಕಳೆದುಕೊಂಡು ಅನಾಥರಾಗಿರುವ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು ಎಂದು ಒತ್ತಾಯಿಸಿ ಪ್ರಧಾನ ಮಂತ್ರಿ ಅವರಿಗೆ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಪತ್ರ ಬರೆದಿದ್ದಾರೆ.

ದುರಂತದ ಸನ್ನಿವೇಶದಲ್ಲಿ ಈ ಮಕ್ಕಳಿಗೆ ಉತ್ತಮ ಭವಿಷ್ಯದ ಭರವಸೆ ನೀಡಬೇಕಿದೆ. ನವೋದಯ ವಿದ್ಯಾಲಯಗಳಲ್ಲಿ ಉಚಿತ ಶಿಕ್ಷಣ ಒದಗಿಸಲು ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ತಮ್ಮ ಪತಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ನವೋದಯ ವಿದ್ಯಾಲಯಗಳನ್ನು ಸ್ಥಾಪಿಸಿದ್ದರು. ದೇಶದಾದ್ಯಂತ ಇಂಥ 661 ಶಾಲೆಗಳಿವೆ‘ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Exit mobile version