ಬೆಂಗಳೂರು, ಮೇ. 01: ದೇಶದಲ್ಲಿ ಕೊರೊನಾ ಆತಂಕ ಹೆಚ್ಚಾಗಿ, ಆಕ್ಸಿಜನ್ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಒದಗಿಸಲು ಹಲವು ಕ್ರಿಕೆಟಿಗರು ನೆರವಿನ ಹಸ್ತ ಚಾಚಿದ್ದಾರೆ.
ಕೊರೊನಾ ಸೋಂಕಿತರ ಸಂಕಷ್ಟಕ್ಕೆ ನೆರವಾಗಿರುವ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಒಂದು ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ದೆಹಲಿ -ಎನ್.ಸಿ.ಆರ್. ಮೂಲದ ನಿಧಿ ಸಂಗ್ರಹ ಸಂಸ್ಥೆಯಾಗಿರುವ ಮಿಷನ್ ಆಕ್ಸಿಜನ್ ಸಂಸ್ಥೆಗೆ ಸಚಿನ್ ನೆರವು ನೀಡಿದ್ದಾರೆ. ಅಲ್ಲದೇ ಕೋವಿಡ್ ವಿರುದ್ಧದ ಹೋರಾಟಕ್ಕೆ ಐಪಿಎಲ್ ಟೂರ್ನಿಯ ರಾಜಸ್ಥಾನ ರಾಯಲ್ಸ್ ತಂಡ 7.5 ಕೋಟಿ ರೂಪಾಯಿ ದೇಣಿಗೆ ನೀಡಿದೆ.
ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ತಂಡದ ಮಾಜಿ ವೇಗಿ ಬ್ರೆಟ್ ಲೀ ಪ್ರಧಾನಮಂತ್ರಿ ಪರಿಹಾರ ನಿಧಿಗೆ 40 ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಇವರಿಗೂ ಮುನ್ನ ಕೆಕೆಆರ್ ತಂಡದ ಆಲ್ರೌಂಡರ್,
ಆಸ್ಟ್ರೇಲಿಯಾದ ಪ್ಯಾಟ್ ಕಮ್ಮಿನ್ಸ್ ಆಕ್ಸಿಜನ್ ಸಿಲಿಂಡರ್ ಖರೀದಿಸಲು 37 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.