download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಅಂತಾರಾಜ್ಯ ವಾಹನ ಚಾಲಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ; ಸಚಿವ ಸೋಮಶೇಖರ್

ಕೇರಳ- ತಮಿಳುನಾಡು ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಂಡರು.

ಚಾಮರಾಜನಗರ, ಆ. 06: ಕೊರೊನಾ ಮೂರನೇ ಅಲೆಯ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯದಿಂದ ಬರುವವರು ಕಡ್ಡಾಯವಾಗಿ ಕೋವಿಡ್ ನೆಗಟಿವ್ ವರದಿಯನ್ನು ತಂದಿರಬೇಕು. ಒಂದು ವೇಳೆ ತರದೇ ಇದ್ದರೆ ಮುಲಾಜಿಲ್ಲದೆ ಅವರನ್ನು ವಾಪಸ್ ಕಳುಹಿಸಿ ಎಂದು ಸಚಿವ ಎಸ್.ಟಿ. ಸೋಮಶೇಖರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕೇರಳ- ತಮಿಳುನಾಡು ಗಡಿ ಭಾಗಕ್ಕೆ ಹೊಂದಿಕೊಂಡಿರುವ ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು, ತೆಗೆದುಕೊಳ್ಳಲಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿಯನ್ನು ಪಡೆದುಕೊಂಡರು. ಬಳಿಕ ಮಾತನಾಡಿದ ಸಚಿವರು, ಕೇರಳ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ದಿನೇ ದಿನೆ ಹೆಚ್ಚಳವಾಗುತ್ತಿದೆ. ಅಲ್ಲಿರುವ ಸೋಂಕು ನಮ್ಮ ರಾಜ್ಯಗಳಿಗೆ ವ್ಯಾಪಿಸದಂತೆ ಕ್ರಮ ವಹಿಸಬೇಕಿದೆ ಎಂದು ತಿಳಿಸಿದರು.

ಅಂತಾರಾಜ್ಯ ವಹಿವಾಟು ಸೇರಿದಂತೆ ಯಾವುದೇ ರೀತಿಯ ವ್ಯಾಪಾರಗಳಿಗೆ, ಇನ್ನಿತರ ಚಟುವಟಿಕೆಗೆ ತೊಂದರೆ ಆಗಬಾರದು. ಆದರೆ ಕೋವಿಡ್ ನಿಯಂತ್ರಣ ಸಂಬಂಧ ಕೆಲವೊಂದು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ. ಹೀಗಾಗಿ ಅಂತಾರಾಜ್ಯಗಳಿಂದ ಬರುವ ವಾಹನಗಳಲ್ಲಿರುವವರ ಕೋವಿಡ್ ತಪಾಸಣೆ ಕಡ್ಡಾಯವಾಗಿರಬೇಕಲ್ಲದೆ, ನೆಗೆಟಿವ್ ಪ್ರಮಾಣಪತ್ರವನ್ನು ಹೊಂದಿರಬೇಕಾಗುತ್ತದೆ. ಒಂದು ವೇಳೆ ನೆಗೆಟಿವ್ ವರದಿಯನ್ನು ಅವರು ತಾರದೇ ಇದ್ದ ಪಕ್ಷದಲ್ಲಿ ಮುಲಾಜಿಲ್ಲದೆ ವಾಪಸ್ ಕಳುಹಿಸಿ ಎಂದು ಸಚಿವ ಸೋಮಶೇಖರ್ ಸೂಚನೆ ನೀಡಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article