ರಾಜ್ಯದಲ್ಲಿ ಸೆ 17ಕ್ಕೆ 30 ಲಕ್ಷ ಲಸಿಕೆ ಗುರಿ – ಸಿಎಂ ಬೊಮ್ಮಾಯಿ

ಬೆಂಗಳೂರು ಸೆ  15 : ಕೊರೊನಾ 3ನೇ ಅಲೆ ಪ್ರಾರಂಭವಾಗುವ ಸೂಚನೆಯಿದ್ದು, ಇದನ್ನು ತಡೆಗಟ್ಟುವ ಸಲುವಾಗು ಸರ್ಕಾರ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದು ಈ ಹಿನ್ನಲೆಯಲ್ಲಿ ಇದೇ ಸೆಪ್ಟೆಂಬರ್ 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಲಸಿಕೆ ಹಾಕಬೇಕು ಎಂದು ನಿರ್ಧರಿಸಲಾಗಿದೆ. ಅದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದೆ. ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆಗಸ್ಟ್ ತಿಂಗಳಲ್ಲಿ ಅತಿ ಹೆಚ್ಚು, ಅಂದರೆ 1.10 ಕೋಟಿ ಲಸಿಕೆ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡೂ ಡೋಸ್ ಲಸಿಕೆ ನೀಡಬೇಕು ಎಂಬ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪ್ರತಿ ಬುಧವಾರ 15 ಲಕ್ಷ ಲಸಿಕೆ ಹಾಕುವ ಗುರಿ ಹಾಕಿಕೊಳ್ಳಲಾಗಿದ್ದು, ಪ್ರತಿದಿನ 5 ಲಕ್ಷ ಲಸಿಕೆಯ ಗುರಿ ಹೊಂದಲಾಗಿದೆ ಎಂದು ತಿಳಿಸಿದರು. 

ಜೊತೆಗೆ ದಿನದಿಂದ ದಿನಕ್ಕೆ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಲಸಿಕೆ ಪ್ರಮಾಣ ಹೆಚ್ಚಾಗಿರುವುದೇ ಇದಕ್ಕೆ ಕಾರಣ. ರಾಜ್ಯದಲ್ಲಿ ಸರಾಸರಿ ಶೇ. 71%  ಜನರಿಗೆ ಮೊದಲ ಡೋಸ್ ಹಾಕಲಾಗಿದೆ. ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

Exit mobile version