ನವದೆಹಲಿ, ಆ. 09: ಕೋವಿಡ್ ಲಸಿಕೆಯ ಕ್ಲಿನಿಕಲ್ ಟ್ರಯಲ್ ದತ್ತಾಂಶ ಬಹಿರಂಗಪಡಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಸರ್ವೋಚ್ಚ ನ್ಯಾಯಾಲಯ ನೋಟಿಸ್ ನೀಡಿದೆ.
ಅಂತರರಾಷ್ಟ್ರೀಯ ವೈದ್ಯಕೀಯ ನಿಯಮಗಳ ಪ್ರಕಾರ, ಲಸಿಕೆಯ ಕ್ಲಿನಿಕಲ್ ಟ್ರಯಲ್ ಮತ್ತು ಲಸಿಕೆ ನೀಡಿದ ನಂತರದ ದತ್ತಾಂಶಗಳನ್ನು ಬಹಿರಂಗಪಡಿಸಬೇಕು ಎಂದು ಅರ್ಜಿದಾರರು ಪ್ರತಿಪಾದಿಸಿರುವುದಾಗಿ ‘ಎಎನ್ಐ’ ಟ್ವೀಟ್ ಮಾಡಿದೆ.