ಮಹಾರಾಷ್ಟ್ರದ ಅಹ್ಮದ್ ನಗರದ ಸಿವಿಲ್ ಆಸ್ಪತ್ರೆಯ ಕೊರೊನಾ ಐಸಿಯು ವಾರ್ಡ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದುರಂತದಲ್ಲಿ 10 ರೋಗಿಗಳು ಮೃತಪಟ್ಟಿದ್ದು, ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಹೇಳಲಾಗಿದೆ.
ಐಸಿಯುನಲ್ಲಿ ದಾಖಲಾದ ರೋಗಿಗಳನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಗಳ ಪ್ರಕಾರ, ಬೆಂಕಿಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಬೆಂಕಿಗೆ ಶಾರ್ಟ್ ಸರ್ಕ್ಯೂಟ್ ಕಾರಣ ಆಗಿರಬಹುದು ಎಂದು ಶಂಕಿಸಲಾಗಿದೆ.
ನೆನ್ನೆ ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದ್ದು 11.40ರ ಸುಮಾರಿಗೆ ಬೆಂಕಿ ನಿಯಂತ್ರಣಕ್ಕೆ ಬಂದಿದೆ. ಘಟನೆ ತಿಳಿದ ತಕ್ಷಣವೇ ರೋಗಿಗಳನ್ನು ಮತ್ತೊಂದು ಆಸ್ಪತ್ರೆಯ ಕೋವಿಡ್ ವಾರ್ಡ್ಗೆ ಸ್ಥಳಾಂತರಿಸಲಾಗಿದೆ ಎಂದು ಅಹ್ಮದ್ ನಗರ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಭೋಸಲೆ ತಿಳಿಸಿದರು