ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಲು ಅಲಹಬಾದ್ ಹೈಕೋರ್ಟ್ ಸಲಹೆ

ಅಲಹಾಬಾದ್ ಸೆ 2 : ಗೋವಿಗೆ ಭಾರತದಲ್ಲಿ ವಿಶೇಷ ಸ್ಥಾನವಿದ್ದು, ಇದು ಭಾರತದ ಸಂಸ್ಕೃತಿಯ ಭಾಗವಾಗಿದೆ. ಹಾಗಾಗಿ ಗೋವನ್ನು ಭಾರತದ ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ತಿಳಿಸಿದೆ. ಗೋ ಹತ್ಯೆ ಮತ್ತು ಗೋ ಕಳ್ಳತನಕ್ಕೆ ಸಂಬಂಧಿಸಿ  ಪ್ರಕರಣವೊಂದರ ವಿಚಾರಣೆ ನಡೆಸಿದ ಅಲಹಬಾದ್ ಹೈಕೋರ್ಟ್, ಗೋ ಹತ್ಯೆ ಮಾಡುವವರನ್ನು ಶಿಕ್ಷಿಸುವ ಮತ್ತು ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ನಿಟ್ಟಿನಲ್ಲಿ ಸಂಸತ್ತು ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಜೊತೆಗೆ ಗೋಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸಿಲಿಕಿದ್ದ ಆರೋಪಿಗೆ ಜಾಮೀನು ನೀಡಲು ಅಲಹಬಾದ್ ಹೈಕೋರ್ಟ ನಿರಾಕರಿಸಿದೆ.

ಗೋ ಮಾಂಸ ಭಕ್ಷಣೆ ಮೂಲಭೂತ ಹಕ್ಕು ಅಲ್ಲ ಜೊತೆಗೆ ಗೋವು ಭಾರತೀಯ ಸಂಸ್ಕೃತಿ‌ಯ ಭಾಗವಾಗಿದ್ದು, ಅದನ್ನು ಹತ್ಯೆ ಮಾಡುವ ಹಕ್ಕು ಯಾಗಿಗೂ ಇಲ್ಲ ಎಂದು ಕೋರ್ಟ್ ಹೇಳಿದೆ. ದೇಶದ ಸಂಸ್ಕೃತಿ‌ಗೆ ಧಕ್ಕೆ‌ಯಾಗುವುದರಿಂದ ದೇಶವು ದುರ್ಬಲವಾಗುವುದಕ್ಕೆ ಕಾರಣವಾಗುತ್ತದೆ. ಆದ್ದರಿಂದ ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಕ್ರಮ ಕೈಗೊಳ್ಳಬೇಕಿದೆ ಎಂದು ಹೈಕೋರ್ಟ್ ತನ್ನ ಅಭಿಪ್ರಾಯವನ್ನು ವ್ಯೆಕ್ತಪಡಿಸಿದೆ.

Exit mobile version