Karnataka : ಕರ್ನಾಟಕ ರಾಜ್ಯ ಪಶುಸಂಗೋಪನಾ ಸಚಿವ(Animal Husbandry Minister) ಪ್ರಭು ಬಿ.ಚವ್ಹಾಣ್,
ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಗ್ರಾಮ ಸಭೆಗಳನ್ನು ಆಯೋಜಿಸುವ ಮುಖೇನ ಗೋಹತ್ಯೆ ವಿರುದ್ಧ ಧ್ವನಿ ಎತ್ತಿದ್ದಾರೆ.

ತಮ್ಮ ಅಧಿಕೃತ ಹೇಳಿಕೆಯಂತೆ ಗೋಹತ್ಯೆ ನಿಷೇಧ ಕಾಯ್ದೆಯ(Cow Slaughter Act) ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ.
ಸಚಿವ ಪ್ರಭು ಬಿ.ಚವ್ಹಾಣ್ ಜಿಲ್ಲಾ ಉಪನಿರ್ದೇಶಕರನ್ನು ಗ್ರಾಮ ಸಭೆಯ ಬಗ್ಗೆ ಕುರಿತು ಪ್ರಶ್ನಿಸಿದರು,
ಆದರೆ ಸಚಿವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಬಳಿಕವೂ ಯಾರಿಂದಲೂ ಸಮರ್ಪಕ ಸ್ಪಂದನೆ ದೊರೆತಿಲ್ಲ ಎನ್ನಲಾಗಿದೆ.
ಬೆಂಗಳೂರಿನ ಹೆಬ್ಬಾಳದ ಪಶುಪಾಲನ ಭವನದ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಸಚಿವರು,
‘ಗೋಹತ್ಯೆ ನಿಷೇಧ ಕಾಯ್ದೆ’ ಜಾರಿಗೆ ತರಲು ಅಧಿಕಾರಿಗಳು ಗ್ರಾಮ ಸಭೆಗಳನ್ನು ಆಯೋಜಿಸಿ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಬೇಕು.
ಗೋಹತ್ಯೆ ನಿಷೇಧ ಹಾಗೂ ದನ ಪಾಲನೆ ನಿಯಮಗಳ ಕುರಿತು ಪೊಲೀಸ್ ಅಧಿಕಾರಿಗಳು(Police Officers) ಹಾಗೂ ಸಿಬ್ಬಂದಿಗೆ ಅರಿವು ಮೂಡಿಸುವ ಕಾರ್ಯಕ್ರಮ ಇನ್ನೂ ಏಕೆ ಮಾಡಿಲ್ಲ? ಎಂದು ಪ್ರಭು ಚವ್ಹಾಣ ಪ್ರಶ್ನಿಸಿದರು.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಗೋಹತ್ಯೆ ಸ್ಥಗಿತಗೊಂಡಿದೆ.
ಇನ್ನಾದರೂ ಅಧಿಕಾರಿಗಳು ಎಚ್ಚೆತ್ತು ಕೆಲವೆಡೆ ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಶಾಶ್ವತವಾಗಿ ಮುಚ್ಚುವ ಮೂಲಕ ಗೋವುಗಳ ಸಂತತಿ ಉಳಿಸಲು ಕೈಜೋಡಿಸಬೇಕು ಎಂದು ಹೇಳಿದರು.

ಕರ್ನಾಟಕ ಭೂಕಂದಾಯ ನಿಯಮಗಳು 1966 ನಿಯಮ 97(1)ರ ಪ್ರಕಾರ ಸರ್ಕಾರದ ಆದೇಶದಂತೆ ಪ್ರತಿ ಗ್ರಾಮದಲ್ಲಿ 100 ಜಾನುವಾರುಗಳಿಗೆ 12 ಹೆಕ್ಟೇರ್ ಜಾನುವಾರು ಮೇಯಿಸಲು ಮೀಸಲಿಡಬೇಕು,
ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ಹಾಗೂ ತಾಲೂಕು ತಹಸೀಲ್ದಾರರು ಸಭೆ ನಡೆಸಿ ಕ್ರಮ ಕೈಗೊಳ್ಳಬೇಕು.
ಈ ಗೋವುಗಳನ್ನು ಸರ್ಕಾರಿ ಗೋಶಾಲೆಗಳಿಗೆ ಬಳಸಿಕೊಳ್ಳುವ ಮೂಲಕ ಗೋವುಗಳ ರಕ್ಷಣೆಯಲ್ಲಿ ಅಧಿಕಾರಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಪ್ರಭು ಚವ್ಹಾಣ ಒತ್ತಿ ಹೇಳಿದರು.
ಚರ್ಮ ರೋಗದಿಂದ ಬಳಲುತ್ತಿರುವ ಜಾನುವಾರುಗಳಲ್ಲಿ ಸೋಂಕು ಶ್ವಾಸಕೋಶಕ್ಕೆ ಸೇರುವುದರಿಂದ ಸಾವಿನ ಪ್ರಮಾಣ ಹೆಚ್ಚಾಗುತ್ತಿದ್ದು,
ಇದನ್ನು ತಡೆಯಲು ರೈತರು ಜಾನುವಾರುಗಳಿಗೆ ಸೋಂಕು ತಗುಲಿದಾಗ ಕೂಡಲೇ ವೈದ್ಯರನ್ನು ಸಂಪರ್ಕಿಸುವಂತೆ ಅರಿವು ಮೂಡಿಸಬೇಕು ಎಂದರು.
ಸ್ಥಳೀಯ ಆಡಳಿತ ಸಂಸ್ಥೆಗಳು (ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ ಮತ್ತು ಕಂದಾಯ ಇಲಾಖೆ ಸಮನ್ವಯದಲ್ಲಿ) ಈ ರೋಗ ಹರಡಲು ಕಾರಣವಾಗುವ ರಕ್ತ ಹೀರುವ ನೊಣಗಳು ಮತ್ತು ಸೊಳ್ಳೆಗಳನ್ನು ನಿಯಂತ್ರಿಸಲು ಫಾಗಿಂಗ್ ಔಷಧಿ ಸಿಂಪಡಿಸಬೇಕು ಮತ್ತು ನೈರ್ಮಲ್ಯದ ಬಗ್ಗೆ ಜಾಗೃತಿ ಮೂಡಿಸಲು ಅಧಿಕಾರಿಗಳು ಜವಾಬ್ದಾರಿ ವಹಿಸಬೇಕು.

ರಾಜ್ಯದಲ್ಲಿ ಚರ್ಮರೋಗ ನಿಯಂತ್ರಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಸಕ್ತಿ ವಹಿಸಿ ಸಾವನ್ನಪ್ಪಿದ ಜಾನುವಾರುಗಳ ಚಿಕಿತ್ಸೆ ಹಾಗೂ ಪರಿಹಾರಕ್ಕೆ ಅನುದಾನ ನೀಡಿದ್ದಾರೆ.
ಈ ಅನುದಾನ ದುರುಪಯೋಗವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಮೃತ ದನಗಳ ಮಾಲೀಕರನ್ನು ಖುದ್ದು ಭೇಟಿ ಮಾಡಿ ಸೋಂಕಿತ ಜಾನುವಾರುಗಳ ಚಿಕಿತ್ಸೆ ಪರಿಶೀಲನೆ ನಡೆಸಬೇಕು ಎಂದು ಸಚಿವರು ಸೂಚನೆ ನೀಡಿದರು.
ಇದನ್ನೂ ಓದಿ : https://vijayatimes.com/kantara-ott-fans/
ಜಾನುವಾರುಗಳಿಗೆ ಲಸಿಕೆ, ಚಿಕಿತ್ಸೆ ನೀಡಲು ಪಶು ಆಸ್ಪತ್ರೆಗಳಲ್ಲೂ ಕೆಲ ಪಶುವೈದ್ಯಾಧಿಕಾರಿಗಳು ಲಭ್ಯವಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು,
ಜಿಲ್ಲಾ ಮಟ್ಟದ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ವರದಿ ತರಿಸಿಕೊಳ್ಳುವ ಬದಲು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು.

ಜಾನುವಾರುಗಳ ರಕ್ಷಣೆ ಮತ್ತು ಆರೋಗ್ಯ ರಕ್ಷಣೆಯಲ್ಲಿ ಪಶುವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು.
ಹುಳು ಹಾಗೂ ಕಾಲುಬಾಯಿ ಜ್ವರ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಪ್ರತಿಪಾದಿಸಿದರು. ರಾಸುಗಳನ್ನು ವೈದ್ಯರಿಗೆ ತೋರಿಸಿ ಸೂಕ್ತ ಚಿಕಿತ್ಸೆ ಕೊಡಿಸುವಂತೆ ರೈತರಿಗೆ ತಿಳಿಸುವ ಪ್ರಯತ್ನ ಮಾಡಬೇಕು.
ಇದನ್ನೂ ಓದಿ : https://vijayatimes.com/state-govt-requests-highcourt/
ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಾನುವಾರುಗಳ ಮಾಲೀಕರಿಗೆ ಸಚಿವರು ಹೇಳಿದರು.
ಸರಕಾರದ ಕಾರ್ಯದರ್ಶಿ ಡಾ.ಸಲ್ಮಾ ಕೆ.ಫಹೀಂ, ಆಯುಕ್ತೆ ಎಸ್.ಅಶ್ವತಿ, ನಿರ್ದೇಶಕ ಡಾ.ಮಂಜುನಾಥ್ ಪಾಳೇಗಾರ್ ಮತ್ತಿತರ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.