ಬಲಿಪಾಡ್ಯಮಿ ದಿನದಂದು ಗೋಪೂಜೆ ಮಾಡುವುದು ಕಡ್ಡಾಯ

cow-worship

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ಎಲ್ಲಾ ದೇವಾಲಯಗಳಲ್ಲಿ ಬಲಿಪಾಡ್ಯಮಿ ದಿನದಂದು ಗೋಪೂಜೆ ಮಾಡುವುದು ಕಡ್ಡಾಯ ಎಂದು ಧಾರ್ಮಿಕ ದತ್ತಿ ಇಲಾಖೆ ದೇವಾಲಯಗಳಿಗೆ ಸುತ್ತೋಲೆ ಹೊರಡಿಸಿದೆ.

ಬಲಿಪಾಡ್ಯಮಿ ದಿನ ಸಂಜೆ 5.30ರಿಂದ 6.30ರ ಸಮಯದಲ್ಲಿ ರಾಜ್ಯದ ಎಲ್ಲ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳಿಗೆ ಪೂಜೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚನೆ ನೀಡಲಾಗಿದೆ. 

ಆ ದಿನ ಗೋವುಗಳನ್ನು ದೇವಾಲಯಕ್ಕೆ ಕರೆತಂದು ಸ್ನಾನ ಮಾಡಿಸಿ, ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಬೇಕು. ನಂತರ ಅಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿ ತಿನಿಸುಗಳ ಗೋಗ್ರಾಸಗಳನ್ನು ಹಸುಗಳಿಗೆ ನೀಡಿ ಆರಾಧಿಸಬೇಕು ಎಂದು ತಿಳಿಸಿದ್ದು, ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೇಳಿದೆ.

ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಹೊರಡಿಸಿರುವ ಆದೇಶದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಹಿಂದೂ ಧರ್ಮದಲ್ಲಿ ಗೋವುಗಳಿಗೆ ತಾಯಿಯ ಸ್ಥಾನವನ್ನು ನೀಡಿದ್ದು, ಗೋಮಾತೆಯುನ್ನು ದೇವತೆ ಎಂದು ಭಾವಿಸಿ ಪೂಜಿಸಲಾಗುತ್ತದೆ. ಹಿಂದೂ ಧರ್ಮದ ಪುರಾಣ ಉಪನಿಷತ್ತುಗಳಲ್ಲಿ ಗೋಮಾತೆಗೆ ವಿಶೇಷ ಸ್ಥಾನಮಾನವಿದೆ, ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುವುದರ ಜೊತೆಗೆ ವಾಸ್ತು ದೋಷವು ನಿವಾರಣೆಯಾಗುತ್ತದೆ ಎಂಬ ಬಲವಾದ ನಂಬಿಕೆ ನಮ್ಮ ಸಮಾಜದಲ್ಲಿದ್ದು, ಈ ಹಿನ್ನೆಲೆ ಗೋಪೂಜೆ ಸಂಪ್ರದಾಯವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಸ್ಥಾನಗಳಲ್ಲಿ ದೀಪಾವಳಿಯ ಬಲಿಪಾಡ್ಯದಂದು ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಆದೇಶಿಸಲಾಗಿದೆ.

Exit mobile version