• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ನಕಲಿ ಪಿಂಚಣಿಗೆ ಕಡಿವಾಣ: 23 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ ಮೇಲೆ ಸರ್ಕಾರದ ನಿಗಾ
0
SHARES
7
VIEWS
Share on FacebookShare on Twitter

ಪಿಂಚಣಿ ಪಡೆಯುತ್ತಿದ್ದ 18 ಲಕ್ಷ ಮಂದಿಗೆ ಶಾಕ್: ಸರ್ಕಾರದಿಂದ ಖಾತೆ ಪರಿಶೀಲನೆ

ಅರ್ಹತೆ ಇಲ್ಲದವರು, ದಾಖಲೆ ಕೊರತೆ ಹೊಂದಿರುವವರ ಪಿಂಚಣಿ ತಾತ್ಕಾಲಿಕ ಸ್ಥಗಿತ

12.61 ಲಕ್ಷ ಫಲಾನುಭವಿಗಳ ಪರಿಶೀಲನೆ; ಅರ್ಹತೆ ದೃಢಪಡಿಸಿಕೊಳ್ಳುವಂತೆ ಸರ್ಕಾರದಿಂದ ಸೂಚನೆ

Bengaluru : ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆಗಳ ಅಡಿಯಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಅನರ್ಹ ಫಲಾನುಭವಿಗಳ ಪತ್ತೆ ಕಾರ್ಯಕ್ಕೆ ಸರ್ಕಾರ ಚುರುಕು ನೀಡಿದೆ.

‘ಸಂಧ್ಯಾ ಸುರಕ್ಷಾ’ ಸೇರಿದಂತೆ ವಿವಿಧ ಪಿಂಚಣಿ ಯೋಜನೆಗಳಲ್ಲಿ ಅರ್ಹತೆ ಹೊಂದಿರದವರು ಸಹ ಪಿಂಚಣಿ ಪಡೆಯುತ್ತಿರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಸರ್ಕಾರ ಸಮಗ್ರ ಪರಿಶೀಲನಾ ಅಭಿಯಾನ ಕೈಗೊಂಡಿದೆ.

ಈ ಪರಿಶೀಲನೆಯಲ್ಲಿ ರಾಜ್ಯಾದ್ಯಂತ 23.14 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳನ್ನು ಶಂಕಾಸ್ಪದ ಪ್ರಕರಣಗಳೆಂದು ಗುರುತಿಸಲಾಗಿದ್ದು, 18.06 ಲಕ್ಷ ಮಂದಿಯ ಪಿಂಚಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Crackdown on fake pensions

ಅರ್ಹತೆ ಸಾಬೀತುಪಡಿಸುವ ದಾಖಲೆಗಳನ್ನು ಸಲ್ಲಿಸಿದ ಬಳಿಕ ಅರ್ಹ ಫಲಾನುಭವಿಗಳ ಪಿಂಚಣಿಯನ್ನು ಮರುಸ್ಥಾಪಿಸಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.

ಶಾಸಕರಾದ ಡಿ. ವೇದವ್ಯಾಸ ಕಾಮತ್ ಹಾಗೂ ಡಾ. ವೈ. ಭರತ್ ಶೆಟ್ಟಿ (Dr. Y. Bharath Shetty) ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ (Dr. G. Parameshwara)

ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 2026ರ ಆಗಸ್ಟ್ 13ರವರೆಗೆ ಒಟ್ಟು 23,14,544 ಪಿಂಚಣಿದಾರರನ್ನು ಶಂಕಾಸ್ಪದ ಪ್ರಕರಣಗಳೆಂದು ಗುರುತಿಸಲಾಗಿದೆ.

ಆದಾಯ ತೆರಿಗೆ ಪಾವತಿದಾರರು, ಎಪಿಎಲ್ (APL) ಪಡಿತರ ಚೀಟಿ ಹೊಂದಿರುವವರು, ನಿಗದಿತ ವಯೋಮಿತಿಗೆ ಹೊಂದಿಕೆಯಾಗದವರು,

ಆದಾಯ ಮಿತಿಯನ್ನು ಮೀರುವವರು ಹಾಗೂ ಸರ್ಕಾರಿ ದಾಖಲೆಗಳಲ್ಲಿ ಕಂಡುಬರುವ ವ್ಯತ್ಯಾಸಗಳನ್ನು ಆಧರಿಸಿ ಈ ಫಲಾನುಭವಿಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ.

ಫಲಾನುಭವಿಗಳ ಮಾಹಿತಿಯನ್ನು ವಿವಿಧ ಸರ್ಕಾರಿ ದಾಖಲೆಗಳೊಂದಿಗೆ ಹೋಲಿಕೆ ಮಾಡುವ ಮೂಲಕ ಅನರ್ಹ ಪ್ರಕರಣಗಳನ್ನು ಪತ್ತೆಹಚ್ಚುವ ಪ್ರಯತ್ನ ನಡೆಸಲಾಗಿದೆ.

ಈ ಕಾರ್ಯದಲ್ಲಿ ಸರ್ಕಾರದ ‘ಸಂಯೋಜನ’ ಮೊಬೈಲ್ ಅಪ್ಲಿಕೇಶನ್ (Application) ಪ್ರಮುಖ ಪಾತ್ರ ವಹಿಸಿದೆ.

ಡಿಜಿಟಲ್ ಮಾಹಿತಿಯ ಆಧಾರದ ಮೇಲೆ ಶಂಕಾಸ್ಪದ ಪ್ರಕರಣಗಳನ್ನು ಗುರುತಿಸಿದ ನಂತರ ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ತೆರಳಿ ಭೌತಿಕ ಪರಿಶೀಲನೆ ನಡೆಸುತ್ತಿದ್ದಾರೆ.

ಫಲಾನುಭವಿ ನಿಗದಿತ ವಿಳಾಸದಲ್ಲಿ ವಾಸಿಸುತ್ತಿದ್ದಾರೆಯೇ, ಅಗತ್ಯ ದಾಖಲೆಗಳು ಲಭ್ಯವಿದೆಯೇ ಹಾಗೂ ಅವರು ನಿಜವಾಗಿಯೂ ಪಿಂಚಣಿಗೆ ಅರ್ಹರೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ಅನುಮಾನಾಸ್ಪದ ಪ್ರಕರಣಗಳ ದಾಖಲೆಗಳನ್ನು ತಹಶೀಲ್ದಾರರಿಗೆ ಕಳುಹಿಸಲಾಗುತ್ತಿದ್ದು, ಪರಿಶೀಲನೆಯ ನಂತರ ಅರ್ಹತೆ ದೃಢಪಟ್ಟರೆ ಪಿಂಚಣಿ ಪುನಃ ಆರಂಭಿಸಲಾಗುತ್ತದೆ.

ಹೀಗಾಗಿ ಪಿಂಚಣಿ ಸ್ಥಗಿತಗೊಂಡಿರುವ ಪ್ರತಿಯೊಬ್ಬರೂ ಅನರ್ಹರು ಎಂದು ಪರಿಗಣಿಸುವಂತಿಲ್ಲ ಎಂಬುದು ಗಮನಾರ್ಹ.

ಯೋಜನೆವಾರು ಅಂಕಿ-ಅಂಶಗಳನ್ನು ಗಮನಿಸಿದರೆ ಸಂಧ್ಯಾ ಸುರಕ್ಷಾ ಯೋಜನೆಯಲ್ಲೇ ಅತಿ ಹೆಚ್ಚು ಶಂಕಾಸ್ಪದ ಪ್ರಕರಣಗಳು ಕಂಡುಬಂದಿವೆ.

ಈ ಯೋಜನೆಯಡಿ 12,61,610 ಫಲಾನುಭವಿಗಳನ್ನು ಪರಿಶೀಲನೆಗೆ ಒಳಪಡಿಸಲಾಗಿದೆ. ಇಂದಿರಾ ಗಾಂಧಿ ರಾಷ್ಟ್ರೀಯ ವೃದ್ಧಾಪ್ಯ ಪಿಂಚಣಿ ಯೋಜನೆಯಡಿ 5,63,938,

ವಿಧವಾ ಪಿಂಚಣಿ ಯೋಜನೆಯಲ್ಲಿ 3,36,746, ಅಂಗವಿಕಲರ ಪಿಂಚಣಿ ಯೋಜನೆಯಲ್ಲಿ 2,56,750 ಪ್ರಕರಣಗಳು ಪತ್ತೆಯಾಗಿವೆ.

ಮನಸ್ವಿನಿ ಯೋಜನೆಯಲ್ಲಿ 17,360, ಎಂಡೋಸಲ್ಫಾನ್ (Endosulfan) ಸಂತ್ರಸ್ತರ ಯೋಜನೆಯಲ್ಲಿ 883, ಆತ್ಮಹತ್ಯೆ ಮಾಡಿಕೊಂಡ ರೈತರ ವಿಧವೆಯರ ಪಿಂಚಣಿಯಲ್ಲಿ 526, ಮೈತ್ರಿ ಯೋಜನೆಯಲ್ಲಿ 454 ಹಾಗೂ ಆ್ಯಸಿಡ್ ದಾಳಿ ಸಂತ್ರಸ್ತರ ಪಿಂಚಣಿ ಯೋಜನೆಯಲ್ಲಿ 8 ಪ್ರಕರಣಗಳು ಪರಿಶೀಲನೆಗೆ ಒಳಪಟ್ಟಿವೆ.

ಜಿಲ್ಲಾವಾರು ಅಂಕಿ-ಅಂಶಗಳಲ್ಲಿಯೂ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ. ಬೆಳಗಾವಿಯಲ್ಲಿ 1,82,758 ಶಂಕಾಸ್ಪದ ಫಲಾನುಭವಿಗಳಲ್ಲಿ 1,51,311 ಮಂದಿಯ ಪಿಂಚಣಿ ಸ್ಥಗಿತಗೊಂಡಿದ್ದರೆ,

ಬೆಂಗಳೂರು ನಗರದಲ್ಲಿ 1,36,669 ಪ್ರಕರಣಗಳಲ್ಲಿ 1,24,073 ಪಿಂಚಣಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

ಮೈಸೂರಿನಲ್ಲಿ 1,33,831 ಪ್ರಕರಣಗಳಲ್ಲಿ 1,11,808, ಕಲಬುರಗಿಯಲ್ಲಿ 1,18,387 ಪ್ರಕರಣಗಳಲ್ಲಿ 98,984, ತುಮಕೂರಿನಲ್ಲಿ 1,18,217 ಪ್ರಕರಣಗಳಲ್ಲಿ 71,111 ಪಿಂಚಣಿಗಳು ಸ್ಥಗಿತಗೊಂಡಿವೆ.

ದಾವಣಗೆರೆಯಲ್ಲಿ 1,04,805 ಪ್ರಕರಣಗಳಲ್ಲಿ 94,012 ಹಾಗೂ ರಾಯಚೂರಿನಲ್ಲಿ 1,01,272 ಪ್ರಕರಣಗಳಲ್ಲಿ 89,387 ಪಿಂಚಣಿಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ರಾಜ್ಯದಲ್ಲಿ ಒಟ್ಟು 83,12,536 ಪಿಂಚಣಿ ಫಲಾನುಭವಿಗಳು ನೋಂದಣಿಯಾಗಿದ್ದು, 2026ರ ಜುಲೈನಲ್ಲಿ 62,43,640 ಮಂದಿಗೆ ಪಿಂಚಣಿ ಪಾವತಿಸಲಾಗಿದೆ.

ಈ ಪರಿಶೀಲನಾ ಕ್ರಮದ ಉದ್ದೇಶ ನಿಜವಾದ ಅರ್ಹರಿಗೆ ಸರ್ಕಾರದ ನೆರವು ತಲುಪಿಸುವುದರ ಜೊತೆಗೆ ನಕಲಿ ಹಾಗೂ ಅನರ್ಹ ಫಲಾನುಭವಿಗಳಿಂದ ಉಂಟಾಗುವ ಸೋರಿಕೆಯನ್ನು ತಡೆಯುವುದಾಗಿದೆ.

ಇದನ್ನು ಓದಿ: https://vijayatimes.com/dkshivakumar-warns-hanur-shootout/

Tags: bengalurufakeGovernmentpensinscam

Related News

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ
ಪ್ರಮುಖ ಸುದ್ದಿ

ಗೌರಿ-ಗಣೇಶ ಹಬ್ಬಕ್ಕೆ KSRTCಯಿಂದ 2,400 ಹೆಚ್ಚುವರಿ ಬಸ್‌ಗಳ ವ್ಯವಸ್ಥೆ

September 12, 2026
ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.