ಕ್ರಿಕೆಟ್: ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೆ.ಎಲ್. ರಾಹುಲ್ ಔಟ್

ಸಿಡ್ನಿ, ಜ. 05: ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಸ್ಥಾನ ಪಡೆದಿದ್ದ ಕನ್ನಡಿಗ ಕೆ.ಎಲ್. ರಾಹುಲ್, ಗಾಯದ ಸಮಸ್ಯೆಯಿಂದಾಗಿ ಸರಣಿಯಿಂದ ಹೊರಗುಳಿದಿದ್ದಾರೆ.

ನಾಲ್ಕು ಪಂದ್ಯಗಳ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯ ಗೆಲ್ಲುವ ಮೂಲಕ 1-1ರ ಸಮಬಲ ಸಾಧಿಸಿವೆ. ಈ ನಡುವೆ ಜ.7 ರಿಂದ ಆರಂಭವಾಗಲಿರುವ 3ನೇ ಟೆಸ್ಟ್ ಪಂದ್ಯಕ್ಕಾಗಿ ಎರಡೂ ತಂಡಗಳು ಕಠಿಣ ಅಭ್ಯಾಸದಲ್ಲಿ ತೊಡಗಿವೆ. ಈ ಹಿನ್ನೆಲೆಯಲ್ಲಿ ಮೂರನೇ ಟೆಸ್ಟ್ ಪಂದ್ಯದಲ್ಲಿ ಸಂಭಾವ್ಯ 11 ಆಟಗಾರರ ಬಳಗದಲ್ಲಿ ಕೆ.ಎಲ್. ರಾಹುಲ್ ಸ್ಥಾನ ಪಡೆಯುವ ನಿರೀಕ್ಷೆ ಹೆಚ್ಚಾಗಿತ್ತು. ಆದರೆ ಅಭ್ಯಾಸದ ವೇಳೆ ಗಾಯದ ಸಮಸ್ಯೆಗೆ ತುತ್ತಾದ ರಾಹುಲ್, ಇದೀಗ ಸರಣಿಯಿಂದ ಹೊರಗುಳಿದಿದ್ದಾರೆ.

ಈ ಬಗ್ಗೆ ಮಂಗಳವಾರ ಪ್ರಕಟಣೆ ಹೊರಡಿಸಿರುವ ಬಿಸಿಸಿಐ, ಭಾರತ ತಂಡದ ಅಭ್ಯಾಸದ ಸಂದರ್ಭ ಕೆ.ಎಲ್‌. ರಾಹುಲ್ ಅವರ ಎಡಗೈ ಮಣಿಕಟ್ಟಿಗೆ ಗಾಯವಾಗಿದ್ದು ಅವರು ಸಂಪೂರ್ಣವಾಗಿ ಚೇತರಿಕೆ ಕಾಣಲು ಮೂರು ವಾರಗಳು ಬೇಕಾಗುತ್ತದೆ. ಹಾಗಾಗಿ ಅವರು ಉಳಿದೆರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದಾರೆ ಎಂದು ತಿಳಿಸಿದೆ.

Exit mobile version