ಲೀಡ್ಸ್ ಆ 25 : ಭಾರತ ಮತ್ತು ಇಂಗ್ಲೆಂಡ್ ನಡುವೆ 3ನೇ ಟೆಸ್ಟ್ ಇಂದಿನಿಂದ ಇಂಗ್ಲೆಂಡ್‌ನ ಲೀಡ್ಸ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿದ್ದು ಇಗಾಗಲೇ ಸರಣಿಯಲ್ಲಿ 1-0 ಅಂತರದಲ್ಲಿ ಮುನ್ನಡೆ ಸಾಧಿಸಿರುವ ಟೀ ಇಂಡಿಯಾ ಈ ಪಂದ್ಯವನ್ನು ಗೆದ್ದು ಮುನ್ನಡೆ ಕಾಯ್ದುಕೊಳ್ಳುವ ತವಕದಲ್ಲಿದೆ. ಹಾಗೆ ಮತ್ತೊಂದೆಡೆ ತವರಿನಲ್ಲಿ ಸರಣಿ ಹಿನ್ನಡೆ ಸಾಧಿಸಿರುವ ಇಂಗ್ಲೆಂಡ್ ಕೂಡ ತಿರುಗೇಟು ನೀಡುವ ವಿಶ್ವಾಸದಲ್ಲಿದೆ.
ಲೀಡ್ಸ್ ಹವಾಮಾನ : ಲಿಡ್ಸ್‌ನ ಹವಮಾನ ವರದಿ ನೋಡುವುದಾದರೆ ಲೀಡ್ಸ್‌ನ ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ತುಂಬಾ ಕಡಿಮೆಯಿದೆ. ಐದು ದಿನಗಳ ಕಾಲವೂ ಪಂದ್ಯ ನಡೆಯಲು ಪೂರಕವಾದ ವಾತಾವರಣವಿರುವುದು ಕ್ರಿಕೆಟ್ ಪ್ರೇಮಿಗಳಿಗೆ ಸಂತಸದ ಸುದ್ದಿ. ಸರಾಸರಿ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇದೆ.
ಪಿಚ್ ವರದಿ : ಈ ಕ್ರೀಡಾಂಗಣ ವೇಗದ ಬೌಲರ್‌ಗಳಿಗೆ ಸಹಕಾರಿಯಾಗಲಿದ್ದು ಸುಮಾರು 3 ದಿನವೂ ಕೂಡ ಬೌನ್ಸಿ ಪಿಚ್ ನಿರ್ಮಾಣವಾಗಲಿದ್ದು, ಇದರ ಜೊತೆಗೆ ಬ್ಯಾಟ್ಸ್‌ಮನ್‌ಗಳಿಗೂ ಪೂರಕವಾಗಿ ವರ್ತಿಸಲಿದೆ. ಹೆಚ್ಚು ಒಣಗಿದ ರೀತಿಯಲ್ಲಿ ಪಿಚ್ ಇರುವ ಕಾರಣದಿಂದಾಗಿ ನಾಲ್ಕು ಮತ್ತು ಐದನೇ ದಿನ ಸ್ಪಿನ್ನರ್‌ಗಳಿಗೂ ಕೂಡ ಪಿಚ್‌ನ ನೆರವಾಗಲಿದೆ.
ಭಾರತ ಸಂಭಾವ್ಯ ತಂಡ: ಕೆಎಲ್ ರಾಹುಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ/ ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್
ಇಂಗ್ಲೆಂಡ್ ಸಂಭಾವ್ಯ ತಂಡ: ರೋರಿ ಬರ್ನ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್/ ಒಲೀ ಪೋಪ್, ಜೋ ರೂಟ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜಾನಿ ಬೈರ್‌ಸ್ಟೊ, ಮೊಯೀನ್ ಅಲಿ, ಒಲ್ಲಿ ರಾಬಿನ್ಸನ್, ಸ್ಯಾಮ್ ಕರನ್, ಸಾಕಿಬ್ ಮಹಮೂದ್ ಮತ್ತು ಜೇಮ್ಸ್ ಆಂಡರ್ಸನ್.
ಪಂದ್ಯದ ಸಮಯ : ಭಾರತೀಯ ಕಾಲಮಾನ ಮಧ್ಯಾಹ್ನ 3.30ರಿಂದ