“ಲಾಲ್ ಸಿಂಗ್ ಚಡ್ಡಾ” ಚಿತ್ರ ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ! : ಕ್ರಿಕೆಟಿಗ ಮಾಂಟಿ ಪನೇಸರ್

Lal singh chadda

ಅಮೀರ್ ಖಾನ್(Amir Khan) ಅಭಿನಯದ `ಲಾಲ್ ಸಿಂಗ್ ಚಡ್ಡಾʼ(Lal Singh Chadda) ಚಿತ್ರ ಹಲವಾರು ವಿವಾದಗಳ ಕೇಂದ್ರವಾಗಿದೆ. ಈಗಾಗಲೇ ಚಿತ್ರ ಬಿಡುಗಡೆಗೆ ಮುಂಚಿತವಾಗಿ ಚಿತ್ರವನ್ನು ಬಹಿಷ್ಕರಿಸುವಂತೆ(Boycott) ಅನೇಕರು ಕರೆ ನೀಡಿದ್ದಾರೆ. ಇದೀಗ ಬಿಡುಗಡೆಯಾದ ಒಂದು ದಿನದಲ್ಲಿ ಚಿತ್ರ ಮತ್ತೊಂದು ವಿವಾದದ ಸುಳಿಗೆ ಸಿಲುಕಿದೆ.

ಇಂಗ್ಲೆಂಡ್(England) ಕ್ರಿಕೆಟಿಗ ಮಾಂಟಿ ಪನೇಸರ್(Manti Panesar) ಟ್ವಿಟ್ಟರ್ನಲ್ಲಿ(Twitter) ಅಮೀರ್ ಖಾನ್ ಅಭಿನಯದ  “ಲಾಲ್ ಸಿಂಗ್ ಚಡ್ಡಾʼ ಚಿತ್ರ  ಸಿಖ್ಖರು ಮತ್ತು ಭಾರತೀಯ ಸೇನೆಗೆ(Indian Army) ಅಗೌರವ ತೋರಿದೆ ಎಂದು ಆರೋಪಿಸಿದ್ದಾರೆ. ಲಾಲ್ ಸಿಂಗ್ ಚಡ್ಡಾ  ಚಿತ್ರ ನಿಷೇಧಕ್ಕೆ ಮಾಂಟಿ ಪನೇಸರ್ ಕರೆ.  ಕ್ರಿಕೆಟಿಗ ಮಾಂಟಿ ಪನೇಸರ್ ಅವರು ಟ್ವಿಟರ್ನಲ್ಲಿ “ಲಾಲ್ ಸಿಂಗ್ ಚಡ್ಡಾ ಚಿತ್ರ ನಾಚಿಕೆಗೇಡಿನದು.

ಈ ಚಲನಚಿತ್ರವು ಭಾರತೀಯ ಸಶಸ್ತ್ರ ಪಡೆಗಳಿಗೆ ಮತ್ತು ಸಿಖ್ಖರಿಗೆ(Sikh) ಸಂಪೂರ್ಣ ಅವಮಾನ ಮಾಡಿದೆ. ಹೀಗಾಗಿ ಚಿತ್ರವನ್ನು ಬಹಿಷ್ಕರಿಸಿ ಎಂದು ಮನವಿ ಮಾಡಿದ್ದಾರೆ. ಇನ್ನು  ಕ್ರಿಕೆಟಿಗ ಮಾಂಟಿ ಪನೇಸರ್ ಅವರ ಮನವಿಗೆ ಅನೇಕರು ಸಹಮತ ಸೂಚಿಸಿದ್ದು, ಈ ಚಿತ್ರವು ಭಾರತೀಯ ಸೇನೆ ಮತ್ತು ಸಿಖ್ಖರನ್ನು ಅವಮಾನಿಸಿದೆ ಎಂದು ದೂರಿದ್ದಾರೆ.

ಇನ್ನು “ಲಾಲ್ ಸಿಂಗ್ ಚಡ್ಡಾ” ಚಿತ್ರ ಬಾಕ್ಸ್ ಆಫೀಸ್ನಲ್ಲಿ ಹೆಣಗಾಡುತ್ತಿದೆ. ಅನೇಕರು ಚಿತ್ರ ಬಹಿಷ್ಕಾರಕ್ಕೆ ಕರೆ ನೀಡಿರುವ ಕಾರಣ ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರು ಸಿನಿಮಾ ನೋಡಲು ಬರುತ್ತಿಲ್ಲ. ಸಾಮಾಜಿಕ ಮಾದ್ಯಮಗಳಲ್ಲಿ ಚಿತ್ರ ಬಹಿಷ್ಕಾರಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಬಾಕ್ಸ್ ಆಫೀಸ್ ಇಂಡಿಯಾದ ವರದಿಯ ಪ್ರಕಾರ, “ಲಾಲ್ ಸಿಂಗ್ ಚಡ್ಡಾ” ಚಿತ್ರ ಮೊದಲ ದಿನ 11.50 ಕೋಟಿ ರೂ.ಗಳಿಸಿದೆ. 

Exit mobile version