ನವದೆಹಲಿ ಸೆ 4 : ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ತನ್ನ ಹಿಂಬಾಲಕರ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದ್ದಾರೆ.
ಭಾರತ ಕ್ರಿಕೆಟ್ ತಂಡದ ನಾಯಕ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ 15 ಕೋಟಿ ಹಿಂಬಾಲಕರನ್ನು ಹೊಂದಿರುವ ಏಷ್ಯಾದ ಹಾಗೂ ಭಾರತದ ಮೊದಲ ವ್ಯಕ್ತಿ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು 7.5 ಕೋಟಿ ಫಾಲೋವರ್ಸ್ ಹೊಂದಿದ ಏಷ್ಯಾದ ಮೊದಲ ವ್ಯೆಕ್ತಿ ಎನ್ನುವ ಕೀರ್ತಿಗೆ ವಿರಾಟ್ ಕೊಹ್ಲಿ ಪಾತ್ರರಾಗಿದ್ದರು. ಇನ್ಸ್ಟಾಗ್ರಾಂ ಮಾತ್ರವಲ್ಲದೇ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣಗಳಾದ ಟ್ವಿಟರ್ ಹಾಗೂ ಫೇಸ್ಬುಕ್ಗಳಲ್ಲೂಸಾಕಷ್ಟು ಹಿಂಬಾಲಕರನ್ನು ಹೊಂದಿದ್ದಾರೆ. ಪ್ರಸ್ತುತ್ ಕೊಹ್ಲಿ ಟ್ವಿಟರ್ನಲ್ಲಿ 4.8 ಕೋಟಿ ಫೇಸ್ಬುಕ್ನಲ್ಲಿ 4.3 ಕೋಟಿ ಹಿಂಬಾಲಕರನ್ನು ಹೊಂದಿದ್ದಾರೆ.