ಹೊಸದಿಲ್ಲಿ, ಡಿ. 09: ವಿಕೆಟ್ ಕೀಪರ್, ಬ್ಯಾಟ್ಸಮನ್ ಪಾರ್ಥಿವ್ ಪಟೇಲ್ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ.
ಟೀಂ ಇಂಡಿಯಾದಲ್ಲಿ ಆಗೊಮ್ಮೆ ಈಗೊಮ್ಮೆ ಕಾಣಿಸಿಕೊಳ್ಳುತ್ತಿದ್ದ ಪಾರ್ಥಿವ್ ಪಟೇಲ್, ಪೂರ್ಣ ಪ್ರಮಾಣದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದರು. ಇದೀಗ 18 ವರ್ಷಗಳ ಸುದೀರ್ಘ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿರುವ 35 ವರ್ಷದ ಪಾರ್ಥಿವ್ ಪಟೇಲ್, ಭಾರತದ ಪರ 25 ಟೆಸ್ಟ್, 35 ಏಕದಿನ ಹಾಗೂ 2 ಟಿ20 ಪಂದ್ಯಗಳಲ್ಲಿ ಭಾರತದ ಪರ ಆಡಿದ್ದರು. ಅಲ್ಲದೇ 194 ಪ್ರಥಮ ದರ್ಜೆ ಪಂದ್ಯಗಳಲ್ಲಿ ಗುಜರಾತ್ ತಂಡವನ್ನು ಪ್ರತಿನಿಧಿಸಿದ್ದರು.
ಪಾರ್ಥಿವ್ ಪಟೇಲ್, 2002ರಲ್ಲಿ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದರೂ, ನಂತರ ದಿನೇಶ್ ಕಾರ್ತಿಕ್ ಹಾಗೂ ಎಂ.ಎಸ್. ಧೋನಿ ಆಗಮನದ ನಂತರ ತಂಡದಲ್ಲಿ ಸ್ಥಾನ ಕಳೆದುಕೊಂಡರು.