New Delhi: 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಿರುವ ಬಿಜೆಪಿ ಹೈಕಮಾಂಡ್, ಪಕ್ಷದ (CT Ravi out from the post) ಸಂಘಟನೆಯಲ್ಲಿ ಅನೇಕ ಮಹತ್ವದ

ಬದಲಾವಣೆಗಳನ್ನು ಮಾಡುತ್ತಿದೆ. ಈಗಾಗಲೇ ಅನೇಕ ರಾಜ್ಯಗಳ ರಾಜ್ಯಾಧ್ಯಕ್ಷರನ್ನು ಬದಲಿಸಿರುವ ಬಿಜೆಪಿ ಹೈಕಮಾಂಡ್ ಇದೀಗ ಕೇಂದ್ರೀಯ ಮಟ್ಟದಲ್ಲೂ ಅನೇಕ ಬದಲಾವಣೆಗಳನ್ನು ಮಾಡಿದೆ.
ಇದನ್ನು ಓದಿ: ಕಣ್ಣಿನ ಗಂಭೀರ ಕಾಯಿಲೆಗಳಿಗೆ ಜೀನ್ ಥೆರಪಿ ಚಿಕಿತ್ಸೆ: ನಾರಾಯಣ ನೇತ್ರಾಲಯದಿಂದ ಯಶಸ್ಸಿನ ಹೆಜ್ಜೆ
ಬಿಜೆಪಿ ತನ್ನ ಕೇಂದ್ರ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಕರ್ನಾಟಕದ ಸಿ.ಟಿ ರವಿ ಅವರನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ. ಈ ಹಿಂದೆ ರಾಜ್ಯದ ಬಿಜೆಪಿ
ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ಟಿ.ರವಿ ಅವರನ್ನು ಬಿಜೆಪಿ ಹೈಕಮಾಂಡ್ , ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿ, ತಮಿಳುನಾಡಿನ ಉಸ್ತುವಾರಿಯನ್ನು ನೀಡಿತ್ತು. ಪಕ್ಷ ಸಂಘಟನೆಯಲ್ಲಿ
ತೊಡಗಿಕೊಳ್ಳುವಂತೆ ಸೂಚನೆ ನೀಡಿತ್ತು. ಆದರೆ ಇದೀಗ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೈಬಿಟ್ಟಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಸಿ.ಟಿ.ರವಿ ಅವರನ್ನು ನೇಮಕ ಮಾಡುವ ಉದ್ದೇಶದಿಂದಲೇ ಹೀಗೆ
ಮಾಡಲಾಗಿದೆ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ (CT Ravi out from the post) ಹರಿದಾಡುತ್ತಿದೆ.
ಬಿಜೆಪಿ ಹೈಕಮಾಂಡ್ ಅರುಣ್ ಸಿಂಗ್, ಕೈಲಾಶ್ ವಿಜಯ್ ವರ್ಗೀಯ, ದುಷ್ಯಂತ ಕುಮಾರ್ ಗೌತಮ್, ತರುಣ್ ಚುಗ್, ವಿನೋದ್ ತಾವ್ಡೆ, ಸುನಿಲ್ ಬನ್ಸಲ್, ರಾಧಾಮೋಹನ್ ಅಗರ್ವಾಲ್ ಅವರನ್ನು ರಾಷ್ಟ್ರೀಯ ಪ್ರಧಾನ
ಕಾರ್ಯದರ್ಶಿ ಹುದ್ದೆಯಲ್ಲಿ ಮುಂದುವರೆಸಿದೆ. ತೆಲಂಗಾಣದ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಬಂಡಿ ಸಂಜಯ್ ಅವರನ್ನು

ಇತ್ತೀಚೆಗೆ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಲಾಗಿತ್ತು. ಇನ್ನು ಮಾಜಿ ಕೇಂದ್ರ ಸಚಿವ ರಾಧಾ ಮೋಹನ್ ಸಿಂಗ್ ಅವರನ್ನು ಪಕ್ಷದ ಉಪಾಧ್ಯಕ್ಷ ಸ್ಥಾನದಿಂದ ಕೈಬಿಡಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಎಕೆ
ಆಂಟನಿ ಅವರ ಪುತ್ರ ಅನಿಲ್ ಆಂಟೋನಿ ಅವರನ್ನು ರಾಷ್ಟ್ರೀಯ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿದೆ.
ಇನ್ನು ಇತ್ತೀಚೆಗೆ ಮಾದ್ಯಮಗಳೊಂದಿಗೆ ಮಾತನಾಡುವಾಗ ಜೆಡಿಎಸ್ ವರಿಷ್ಠರಾದ ದೇವೇಗೌಡರು, ರಾಜ್ಯ ಬಿಜೆಪಿಗೆ ಸಿ.ಟಿ.ರವಿ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮತ್ತು ಬಸವನಗೌಡ ಪಾಟೀಲ್ ಯತ್ನಾಳ
ಅವರನ್ನು ವಿರೋಧ ಪಕ್ಷದ ನಾಯಕರಾಗಿ ನೇಮಕ ಮಾಡುವ ಕುರಿತು ತೀರ್ಮಾನವಾಗಿದೆ ಎಂದು ಹೇಳಿದ್ದರು. ದೇವೇಗೌಡರ ಈ ಹೇಳಿಕೆ ನಿಜವಾಗುವ ಸೂಚನೆಗಳು ಸಿಗುತ್ತಿವೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ
ಸ್ಥಾನದಿಂದ ಕೈಬಿಡಲಾಗಿರುವ ಸಿ.ಟಿ.ರವಿ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ಒಲಿಯುತ್ತಾ ಎಂಬುದನ್ನು ಕಾದು ನೋಡಬೇಕಿದೆ.