ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ತೀವ್ರವಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ ರವಿಯವರಿಗೆ ಕೊರೊನಾ ಸೋಂಕು ದೃಡಪಟ್ಟಿದೆ.
ಸೋಮಾವಾರ ಮುಂಜಾನೆ ಈ ಕುರಿತು ಟ್ವೀಟ್ ಮಾಡಿರುವ ಸಚಿವ ಸಿಟಿ ರವಿ, ಥರ್ಡ ಅಂಪೈರ್ ಫಲಿತಾಂಶದಲ್ಲಿ
ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ ಎಂದಿದ್ದಾರೆ.
ಕಳೆದ ಒಂದು ವಾರದಲ್ಲಿ ಸಿ.ಟಿ. ರವಿ ಎರಡು ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಈ ಪೈಕಿ ಒಮ್ಮೆ ನೆಗೆಟಿವ್ ಬಂದರೆ ಮತ್ತೊಮ್ಮೆ ಪಾಸಿಟಿವ್ ಬಂದಿತ್ತು. ಹೀಗಾಗಿ ಮೂರನೇ ಬಾರಿಗೆ ಟೆಸ್ಟ್‌ಗೆ ಒಳಗಾಗಿ ಥರ್ಡ್ ಅಂಪೈರ್ ರಿಸಲ್ಟ್‌ಗಾಗಿ ಕಾಯುತ್ತಿದ್ದೇನೆ ಎಂದು ಭಾನುವಾರವಷ್ಟೇ(ಜು.12) ಅವರು ಟ್ವೀಟ್ ಮಾಡಿದ್ದರು.
ಇದೀಗ ರಿಸಲ್ಟ್ ಹೊರ ಬಿದ್ದಿದ್ದು, ರವಿಗೆ ಸೊಂಕು ಪಾಸಿಟಿವ್ ಇದ್ದರ, ಹೆಂಡತಿ ಮಕ್ಕಳಿಗೆ ನೆಗೆಟಿವ್ ವರದಿಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಥರ್ಡ್ ಅಂಪೈರ್ ಫಲಿತಾಂಶದಲ್ಲಿ ನನಗೆ ಕೋವಿಡ್ ಪಾಸಿಟಿವ್ ಇದೆ ಎಂಬುದು ದೃಢವಾಗಿದೆ. ಆದರೆ ಯಾವುದೇ ತೊಂದರೆಗಳ ಲಕ್ಷಣಗಳಿಲ್ಲದೆ ನಾನು ಸಹಜವಾಗಿದ್ದೇನೆ. ಸೂಕ್ತ ಚಿಕಿತ್ಸೆಗಳನ್ನು ಪಡೆಯುತ್ತಾ ನಾನು ಇಲ್ಲಿಂದಲೇ ಕೆಲಸ ಮುಂದುವರಿಸುಲಿದ್ದು ಆದಷ್ಟು ಬೇಗ ಗುಣಮುಖನಾಗಿ ನಿಮ್ಮೆಲ್ಲರೊಂದಿಗೆ ಕೆಲಸ ಮಾಡುತ್ತೇನೆ. ಎಂದಿದ್ದಾರೆ.