ಬೆಂಗಳೂರು ಜ 21 : ಕೊರೊನಾ ಮತ್ತು ಓಮಿಕ್ರಾನ್ ಹೆಚ್ಚಳವಾಗಿದ್ದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿದ್ದ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆದಿದೆ.
ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುವ ಬಗ್ಗೆ ತೀರ್ಮಾನಿಸಲಾಯಿತು. ವೀಕೆಂಡ್ ಕರ್ಫ್ಯೂ ಬಗ್ಗೆ ಸಾರ್ವಜನಿಕರಿಂದ ಅಪಸ್ವರ ಕೇಳಿ ಬಂದ ಹಿನ್ನಲೆಯಲ್ಲಿ ಸರ್ಕಾರ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆಯುವ ತೀರ್ಮಾನ ತೆಗೆದುಕೊಂಡಿದೆ.
ನೈಟ್ ಕರ್ಫ್ಯೂ ಮುಂದುವರಿಕೆ : ವೀಕೆಂಡ್ ಕರ್ಫ್ಯೂ ಹಿಂಪಡೆದರೂ ಕೂಡ ಕೊರೊನಾ ಹೆಚ್ಚಿರುವ ಕಾರಣ ನೈಟ್ ಕರ್ಫ್ಯೂವನ್ನು ಮುಂದುವರಿಸಲಾಗುತ್ತದೆ ಎಂದು ಸಭೆಯಲ್ಲಿ ನಿರ್ಣಯಿಸಲಾಗಿದೆ.