ರೈತರ ಪಂಪ್‌ಸೆಟ್‌ಗಳಿಗೆ ಕುಸುಮ್-ಸಿ ಯೋಜನೆಯ ಮೂಲಕ ನಿರಂತರವಾಗಿ ವಿದ್ಯುತ್

 ಬೆಂಗಳೂರು ನ 27 : ರೈತರ ಪಂಪ್‌ಸೆಟ್‌ಗಳಿಗೆ ನಿರಂತರವಾಗಿ ವಿದ್ಯುತ್ ಪೂರೈಕೆಯನ್ನು ಖಚಿತಪಡಿಸಲು ರಾಜ್ಯ ಸರಕಾರವು ಕುಸುಮ್-ಸಿ ಯೋಜನೆಯನ್ನು ಜಾರಿಗೊಳಿಸುತ್ತಿದೆ.

ನವೀಕರಿಸಬಹುದಾದ ಇಂಧನ ಮೂಲವಾದ ಸೌರ ವಿದ್ಯುತ್ ಮೂಲಕ ರೈತರ ಪಂಪ್‌ಸೆಟ್‌ಗಳಿಗೆ ನಿರಂತರ ವಿದ್ಯುತ್ ಒದಗಿಸಲು ಇಂಧನ ಇಲಾಖೆ ಕುಸುಮ್ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ.

ರಾಜ್ಯದಲ್ಲಿ ಥ್ರೀ ಫೇಸ್ ವಿದ್ಯುತ್ ಗಾಗಿ ಭಾರಿ ಬೇಡಿಕೆ ಇದೆ. ಆದರೆ ಸಾಂಪ್ರದಾಯಿಕ ವಿದ್ಯುತ್ ಮೂಲಗಳಿಂದ ವಿದ್ಯುತ್ ಉತ್ಪಾದನೆ ಆಗದ ಕಾರಣ ರೈತರಿಗೆ ಕನಿಷ್ಠ ಏಳು ಗಂಟೆ ವಿದ್ಯುತ್ ನೀಡಲೂ ಸಾಧ್ಯವಾಗುತ್ತಿಲ್ಲ. ಇದನ್ನು ಮನಗಂಡು ಕುಸುಮ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಈ ಬಗ್ಗೆ ಮಾಹಿತಿಯನ್ನು ನೀಡಿರುವ ಇಂಧನ ಸಚಿವ ಸುನಿಲ್ ಕುಮಾರ್ ಅವರು, ರೈತರ ಪಂಪ್‌ಸೆಟ್‌ಗಳಿಗೆ ಸೋಲಾರ್ ವಿದ್ಯುತ್ ಸರಬರಾಜು ಮಾಡುವ ಯೋಜನೆಯನ್ನು ರೂಪಿಸಲಾಗಿದೆ. ಇದಕ್ಕೆ ತಾಂತ್ರಿಕ ಒಪ್ಪಿಗೆಯನ್ನು ಪಡೆಯುವ ಸಲುವಾಗಿ ಕೇಂದ್ರ ಸರಕಾರಕ್ಕೆ ರವಾನಿಸಲಾಗಿದೆ. ಗ್ರಾಮ ಮಟ್ಟದಲ್ಲಿ 5-10 ಮೇಘ ಬ್ಯಾಟ್ ಸೌರ ವಿದ್ಯುತ್ ಉತ್ಪಾದನೆಯನ್ನು ಮಾಡಿ ಅದನ್ನು ನೇರವಾಗಿ ರೈತರಿಗೆ ತಲುಪಿಸಲಾಗುವುದು ಎಂದಿದ್ದಾರೆ.

Exit mobile version