Bhopal : ದಾಬ್ರಾ ಪಟ್ಟಣದಲ್ಲಿ ಮೂರು ವರ್ಷಗಳ ಹಿಂದೆ ಪೊಲೀಸ್ ಕಸ್ಟಡಿಯಲ್ಲಿ(Custodial Death Case) ವ್ಯಕ್ತಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿದ ನಂತರ ಮಧ್ಯಪ್ರದೇಶ ಹೈಕೋರ್ಟ್‌ನ(Madhya Pradesh) ಗ್ವಾಲಿಯರ್ ಪೀಠವು ಐವರು ಪೊಲೀಸ್ ಸಿಬ್ಬಂದಿ ಮತ್ತು ಒಬ್ಬ ಗೃಹ ರಕ್ಷಕ ಯೋಧನಿಗೆ 20 ಲಕ್ಷ ದಂಡ ವಿಧಿಸಿದ್ದಾರೆ.

ಇನ್ನು ಈ ಪ್ರಕರಣವನ್ನು ಸಿಬಿಐಗೆ(CBI) ವಹಿಸಬೇಕು ಎಂದು ನ್ಯಾಯಮೂರ್ತಿ ಜಿ.ಎಸ್.ಅಹ್ಲುವಾಲಿಯಾ ಅವರಿದ್ದ ಏಕ ಪೀಠವೂ ಆದೇಶಿಸಿದೆ.
ಮಧ್ಯಪ್ರದೇಶದ ಬೆಳಗಾದ ಗ್ರಾಮದ ನಿವಾಸಿ ಸುರೇಶ್ ರಾವತ್ ಅವರನ್ನು ಗ್ವಾಲಿಯರ್‌ನಲ್ಲಿ ಸ್ಥಳೀಯ ಪೊಲೀಸರು ಆಗಸ್ಟ್ 10, 2019 ರಂದು ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧಿಸಿದ್ದಾರೆ.
ಬಂಧನದ ಕೆಲವು ಗಂಟೆಗಳ ನಂತರ, ಸುರೇಶ್ ರಾವತ್ ಬೆಳಗಾದ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳು(CCTV Footages) ಲಭ್ಯವಿಲ್ಲದಿದ್ದಾಗ ಮತ್ತು ವಿದ್ಯುತ್ ಕಡಿತದ ಸಮಯದಲ್ಲಿ ಸುರೇಶ್ ರಾವತ್ 10 ನಿಮಿಷಗಳಲ್ಲಿ ಆತ್ಮಹತ್ಯೆ(Custodial Death Case) ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದರು.
ಇದನ್ನೂ ಓದಿ : https://vijayatimes.com/187-coins-removed/
ಆದರೆ, ಪೊಲೀಸರು ಆತನಿಗೆ ಥಳಿಸಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದರು. ನಂತರ ಐವರು ಪೊಲೀಸ್ ಸಿಬ್ಬಂದಿ ಮೇಲೆ ಕೊಲೆ ಆರೋಪದಡಿ ಪ್ರಕರಣ ದಾಖಲಿಸಲಾಗಿತ್ತು.
ಮೃತನ ಮಗ ಹೈಕೋರ್ಟ್ ಮೆಟ್ಟಿಲೇರಿದ್ದನು. ಇನ್ನು ನ್ಯಾಯಾಧೀಶ ಅಹ್ಲುವಾಲಿಯಾ ಅವರಿದ್ದ ಏಕ ಪೀಠ,
“ಪ್ರಕರಣದ ಸಂಪೂರ್ಣ ಸತ್ಯ ಮತ್ತು ಸಂದರ್ಭಗಳನ್ನು ಪರಿಗಣಿಸಿ, ಈ ನ್ಯಾಯಾಲಯವು ನಿರ್ಧಿಷ್ಟ ಅಭಿಪ್ರಾಯವನ್ನು ಹೊಂದಿದೆ. ಜಿಲ್ಲಾ ಪೊಲೀಸ್ ಗ್ವಾಲಿಯರ್ ಮತ್ತು ತನಿಖಾಧಿಕಾರಿಗಳು ಈ ನ್ಯಾಯಾಲಯದ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ.
ಅವರು ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ರಕ್ಷಿಸುವ ಉದ್ದೇಶದಿಂದ ಕೆಲಸ ಮಾಡುತ್ತಿದ್ದಾರೆ.

ಆದ್ದರಿಂದ, ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಬೆಳಕಿನಲ್ಲಿ, ಗ್ವಾಲಿಯರ್ ಪೊಲೀಸರು ಮುಕ್ತ ಮತ್ತು ನ್ಯಾಯಯುತ ತನಿಖೆಯನ್ನು ನಡೆಸುವಲ್ಲಿ ದಯನೀಯವಾಗಿ ವಿಫಲರಾಗಿದ್ದಾರೆ ಎಂಬುದು ಸ್ಪಷ್ಟವಾಗಿದೆ.
ಅದರಂತೆ ಐಪಿಸಿ ಸೆಕ್ಷನ್ 302,306,342,34 ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7ರ ಅಡಿಯಲ್ಲಿ ಅಪರಾಧಕ್ಕಾಗಿ ಬೆಳಗಾದ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಈ ಮೂಲಕ ಸಿಬಿಐಗೆ ವರ್ಗಾಯಿಸಲಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.
ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲಾ (ಐದು) ಪೊಲೀಸರನ್ನು ಅಮಾನತುಗೊಳಿಸಬೇಕು ಮತ್ತು ಅವರನ್ನು ಪ್ರಧಾನ ಕಚೇರಿ ಗ್ವಾಲಿಯರ್‌ನಿಂದ 700 ಕಿಮೀ ದೂರದಲ್ಲಿ ಇರಿಸಬೇಕು.
ವಿಚಾರಣೆ ಪೂರ್ಣಗೊಳ್ಳುವವರೆಗೆ ಅವರನ್ನು ಅಮಾನತುಗೊಳಿಸಬೇಕು ಎಂದು ನ್ಯಾಯಾಲಯ ಹೇಳಿದೆ.
- ಮಹೇಶ್.ಪಿ.ಎಚ್