Bengaluru: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ (Cyber security rule – Karnataka) 43 ಸೈಬರ್ ಕ್ರೈಮ್ ಪೊಲೀಸ್ ಠಾಣೆಗಳು, ಸೈಬರ್ ವಂಚನೆಗೊಳಗಾದ ಜನರಿಗೆ ಸುರಕ್ಷತೆ

ಒದಗಿಸುವ ಕೆಲಸ ಮಾಡುತ್ತಿವೆ. ಸುರಕ್ಷತೆಯ ಭಾಗವಾಗಿ ರಾಜ್ಯ ಸರ್ಕಾರ ಶೀಘ್ರವೇ ಸೈಬರ್ ಸೆಕ್ಯುರಿಟಿ ನಿಯಮ ಜಾರಿಗೆ ತರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ (G Parameshwar) ಹೇಳಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ, ಸಿಐಡಿ (CID) ಹಾಗೂ ಸೈಬರ್ ಕ್ರೈಂ ತನಿಖಾ ತರಬೇತಿ ಮತ್ತು ಸಂಶೋಧನಾ ಸಂಸ್ಥೆಯು (Cybercrime Investigation Training and Research Institute)
ಬೆಂಗಳೂರಿನಲ್ಲಿ ಆಯೋಜಿಸಿದ್ದ ‘ಸೈಬರ್ ಅಪರಾಧ ತನಿಖಾ ಶೃಂಗ ಸಭೆ-2024’ ಕಾರ್ಯಕ್ರಮವನ್ನು ಉದ್ಘಾಟಿಸಿ (Cyber security rule – Karnataka) ಅವರು ಮಾತನಾಡಿದ್ದಾರೆ.
ಸರ್ಕಾರದ ಹಲವು ಇಲಾಖೆಗಳು ಜನರಿಗೆ ಸುಲಭವಾಗಿ ಸೇವೆ ಒದಗಿಸಲು ಡಿಜಿಟಲ್ ಮೊರೆ ಹೋಗುತ್ತಿವೆ. ಸೇವಾಸಿಂಧು, ಮೊಬೈಲ್ ಬ್ಯಾಂಕಿಂಗ್, ವರ್ಚ್ಯುವಲ್ ಕ್ಲಾಸ್ಗಳು (Sewasindhu, Mobile
Banking, Virtual Class) ಸೇರಿದಂತೆ ವಿವಿಧ ರೀತಿಯ ಡಿಜಿಟಲ್ ವ್ಯವಸ್ಥೆ ಅಳವಡಿಸಿಕೊಳ್ಳುತ್ತಿದ್ದಾರೆ. ಇದನ್ನು ಅಳವಡಿಸಿಕೊಳ್ಳುವ ಮೊದಲು ಸೈಬರ್ ಸುರಕ್ಷತೆ ಮತ್ತು ಭದ್ರತೆ ಬಗ್ಗೆ ಗಮನಹರಿಸಬೇಕು.
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿರುವ ಸೈಬರ್ ಕ್ರೈಂ ಪೊಲೀಸ್ ಠಾಣೆಗಳು (Cyber Crime Police Station) ವಂಚನೆಗೊಳಗಾದ ಜನರಿಗೆ ಸುರಕ್ಷತೆ ಒದಗಿಸುತ್ತಿವೆ. ಸೈಬರ್ ಅಪರಾಧಿಗಳು ಡಿಜಿಟಲ್ ಜಗತ್ತಿನಲ್ಲಿ

ಹ್ಯಾಕಿಂಗ್ ಮೂಲಕ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ದತ್ತಾಂಶವನ್ನು ಸುರಕ್ಷಿತವಾಗಿ ಕಾಪಾಡಿಕೊಳ್ಳುವುದೇ ಇದಕ್ಕೆ ಪರಿಹಾರ. ಈ ಬಗ್ಗೆ ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕು
ಎಂದು ಸಚಿವರು ಸಲಹೆ ನೀಡಿದ್ದಾರೆ. ರಾಜ್ಯ ಸರ್ಕಾರವು ಸೈಬರ್ ಕ್ರೈಂ ವಿಭಾಗದ ಬಲ ಹೆಚ್ಚಿಸಲು ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ, ಕ್ಲೌಡ್ ಕಂಪ್ಯೂಟಿಂಗ್ (Cloud computing) ಸೇರಿದಂತೆ ವಿವಿಧ
ತಂತ್ರಜ್ಞಾನ ವಲಯಗಳಲ್ಲಿ ಪರಿಣತಿ ಹೊಂದಿರುವ ಕಂಪನಿಗಳ ನೆರವು ಪಡೆದುಕೊಳ್ಳಲಾಗುವುದು. ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ತರಬೇತಿ ನೀಡಲಾಗುತ್ತಿದೆ. ಸೈಬರ್ ಅಪರಾಧಿಗಳು ಜಗತ್ತಿನ
ಯಾವುದೋ ಪ್ರದೇಶದಲ್ಲಿ ಕುಳಿತುಕೊಂಡು ಇನ್ನೊಂದು ಪ್ರದೇಶದ ಮೇಲೆ ಬೆದರಿಕೆ, ವಂಚನೆ ಸೇರಿದಂತೆ ಇನ್ನಿತರ ಸೈಬರ್ ದಾಳಿ ನಡೆಸುತ್ತಾರೆ. ಇದು ಆಯಾ ವಲಯದ ಮಾರುಕಟ್ಟೆ, ಹೂಡಿಕೆ ಮೇಲೆ ವ್ಯತಿರಿಕ್ತ
ಪರಿಣಾಮ ಬೀರುತ್ತಿದೆ. ತನಿಖೆ ನಡೆಸಿ ಅಪರಾಧಿಗಳನ್ನು ಮಟ್ಟಹಾಕಲು ಜಾಗತಿಕ ಮಟ್ಟದಲ್ಲಿ ಸಹಯೋಗ ಅಗತ್ಯವಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಹೇಮಾವತಿ ನದಿಯ ನೀರನ್ನಾದರೂ ಬೆಂಗಳೂರು ನಗರಕ್ಕೆ ಬಿಡಿ ಎಂದು ಸರ್ಕಾರಕ್ಕೆ ಸಲಹೆ ನೀಡಿದ ಹೆಚ್.ಡಿ.ದೇವೇಗೌಡ.