ತೌಕ್ತೆ ಚಂಡಮಾರುತದ ಎಫೆಕ್ಟ್: ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯದಲ್ಲಿ ತೊಡಗಿ: ಸಚಿವರು, ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು, ಮೇ. 17: ರಾಜ್ಯದ ಕರಾವಳಿ ಪ್ರದೇಶದಲ್ಲಿ ಜನಜೀವನದ ಮೇಲೆ ಪರಿಣಾಮ ಬೀರಿರುವ ತೌಕ್ತೆ ಚಂಡಮಾರುತದಿಂದ ತತ್ತರಿಸಿರುವ ಜನರಿಗೆ ಸೂಕ್ತ ನೆರವು ನೀಡುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರು ಹಾಗೂ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರಾವಳಿ ಭಾಗದಲ್ಲಿ ಉಂಟಾಗಿರುವ ತೌಕ್ತೆ ಚಂಡಮಾರುತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗು ಉಸ್ತುವಾರಿ ಸಚಿವರುಗಳಿಂದ ಮಾಹಿತಿ ಪಡೆದುಕೊಂಡು, ಅಗತ್ಯ ಸೂಚನೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳ ಜೊತೆಗೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ‌ ನೀಡಿ ಪರಿಹಾರ ಹಾಗು ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಸರ್ಕಾರದಿಂದ ಯಾವುದೇ ತುರ್ತು ನೆರವು ಬೇಕಿದ್ದರೂ ಸಂಬಂಧಪಟ್ಟ ಸಚಿವರುಗಳಿಗೆ ಅಥವಾ ತಮಗೆ ನೇರವಾಗಿ ಕರೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದಾರೆ.

ಕೊರೊನಾ‌ ಸಂಕಷ್ಟದ ನಡುವೆ ರಾಜ್ಯಕ್ಕೆ ಅಪ್ಪಳಿಸಿರುವ ತೌಕ್ತೆ ಚಂಡಮಾರುತದಿಂದ ರಾಜ್ಯದ ಹಲವು ‌ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. ಪ್ರಮುಖವಾಗಿ ಕರಾವಳಿ ಭಾಗದ ಮಂಗಳೂರು ಹಾಗೂ ಉಡುಪಿ ಜಿಲ್ಲೆಯ ‌ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

https://twitter.com/CMofKarnataka/status/1393790813105127428?s=08
Exit mobile version