ಆನೇಕಲ್ ಅ 6 : ಅಡುಗೆ ಮಾಡುತ್ತಿದ್ದ ವೇಳೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಒಂದೇ ಮನೆಯ 7 ಮಂದಿ ಸೇರಿದಂತೆ ಒಟ್ಟು 9 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕರ್ನಾಟಕದ ಗಡಿಭಾಗವಾಗಿರುವ ಹೊಸೂರು ಪಟ್ಟಣದ ರಾಮನಗರದ ಮನೆಯೊಂದರಲ್ಲಿ ನಡೆದಿದೆ.
ಹೊಸೂರಿನ ರಾಮನಗರದ ನಿವಾಸಿಗಳಾಗಿರುವ ಭೀಮಸಿಂಗ್, ಅರವಿಂದ್, ರೂಬಿ, ಚಂದ್ರಾದೇವಿ, ಭೀಮ್ಸಿಂಗ್, ಹೃತಿಕ್, ಸಬೀರ್ ಮತ್ತು ಸಾಧಿಕ್ ಎಂಬವರೇ ಗಂಭೀರವಾಗಿ ಗಾಯಗೊಂಡವರು. ಉತ್ತರ ಪ್ರದೇಶದಿಂದ ಹೊಸೂರಿಗೆ ಬಂದಿದ್ದ ಈ ಕುಟುಂಬ ಪಾನಿಪೂರಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.
ಈ ಘಟನೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ ಗಾಯಗೊಂಡವರನ್ನು ಹೊಸೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ಈ ಬಗ್ಗೆ ಹೊಸುರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.