ಹೊಸದಿಲ್ಲಿ, ಎ. 01: ನಟ ರಜನಿಕಾಂತ್ ಅವರು 2019ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ʻನಟ ರಜನಿಕಾಂತ್ ಅವರಿಗೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಟನಾಗಿ, ನಿರ್ಮಾಪಕರಾಗಿ ಸಿನಿಮಾ ಕ್ಷೇತ್ರಕ್ಕೆ ರಜನಿಕಾಂತ್ ಅವರ ಕೊಡುಗೆ ಅಪಾರʼ ಎಂದು ಹೊಗಳಿದ್ದಾರೆ.
ನಟ ರಜನಿಕಾಂತ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಬಂದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ರಾಜಕೀಯ ನಾಯಕರು, ಸಿನಿಮಾ ನಟರು ಹಾಗೂ ಕೋಟ್ಯಾಂತರ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.