ದಕ್ಷಿಣ ಕನ್ನಡದಾದ್ಯಂತ ಕಾಲೇಜುಗಳಲ್ಲಿ ಪರೀಕ್ಷೆ ಬೇಡವೆಂದ ಮುಸ್ಲಿಂ ವಿದ್ಯಾರ್ಥಿನಿಯರು!

hijab

ಹಿಜಾಬ್(Hijab) ಕುರಿತು ತೀರ್ಪು(Verdict) ನೀಡಿದ ಹೈಕೋರ್ಟ್(Highcourt) ವಿರುದ್ಧ ಮುಸ್ಲಿಂ(Muslim) ವಿದ್ಯಾರ್ಥಿನಿಯರು(Students) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರತಿ ಕಾಲೇಜುಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆ ಬೇಡವೆಂದು ಹಠ ಹಿಡಿದು ಪರೀಕ್ಷೆ ಕೈ ಬಿಟ್ಟಿದ್ದಾರೆ. ದಕ್ಷಿಣ ಕನ್ನಡದಾದ್ಯಂತ 197 ಪರ್ವ ವಿಶ್ವವಿದ್ಯಾಲಯ (PU) ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್‌ನಲ್ಲಿ ಪರೀಕ್ಷೆಯನ್ನು ತೆಗೆದುಕೊಳ್ಳಬೇಕೆಂಬ ತಮ್ಮ ಬೇಡಿಕೆಯನ್ನು ತಿರಸ್ಕರಿಸಿದ ನಂತರ ಸತತ ಎರಡನೇ ದಿನವಾದ ಶುಕ್ರವಾರವೂ ಕೂಡ ಪೂರ್ವಸಿದ್ಧತಾ ಪರೀಕ್ಷೆಗಳನ್ನು ಬೇಡ ಎಂದು ತಿರಸ್ಕರಿಸಿದ್ದಾರೆ.

ಇವರಲ್ಲಿ ಉಪ್ಪಿನಂಗಡಿ ಪಿಯು ಕಾಲೇಜಿನ ಸುಮಾರು 25 ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಧರಣಿ ನಡೆಸಿದರು. ತರಗತಿಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ರತಿಭಟನೆಗಳು ನಡೆಸಿದರು. ಹಲವಾರು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗದೆ ಮನೆ ಕಡೆ ದಾರಿ ನೋಡಿದ್ದಾರೆ ಎಂದು ಪಿಯು (ಡಿಡಿಪಿಯು) ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಜಯಣ್ಣ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಗೈರುಹಾಜರಾದವರ ಪಟ್ಟಿಯನ್ನು ಕಾಲೇಜು ಮಟ್ಟದಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದರು. ಇದಕ್ಕೂ ಮುನ್ನ ಉಪ್ಪಿನಂಗಡಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಧರಣಿ ನಡೆಸಿದ ಬಳಿಕ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಪುರುಷ ವಿದ್ಯಾರ್ಥಿಗಳು ಸಹ ಒಗ್ಗಟ್ಟಿನಿಂದ ಪರೀಕ್ಷೆಗಳನ್ನು ಬಹಿಷ್ಕರಿಸಿದರು. ಉಪನ್ಯಾಸಕರು ವಿದ್ಯಾರ್ಥಿನಿಯರಿಗೆ ಸಲಹೆ ನೀಡಲು ಪ್ರಯತ್ನಿಸಿದರು ಕೂಡ ಒಪ್ಪದ ವಿದ್ಯಾರ್ಥಿನಿಯರು, ಹಿಜಾಬ್ ಅನ್ನು ತೆಗೆಯೊದಿಲ್ಲ ಎಂಬ ನಿರ್ಧಾರದಲ್ಲಿ ದೃಢವಾಗಿ ನಿಂತರು.

ಉಪ್ಪಿನಂಗಡಿ ಮಲಿಕ್ ದೀನರ್, ಜುಮಾ ಮಸೀದಿ ಅಧ್ಯಕ್ಷ ಮುಸ್ತಫಾ ಕೆಂಪಿ, ಗ್ರಾಮ ಪಂಚಾಯತ್ ಸದಸ್ಯ ಯು.ಟಿ ಮಹಮ್ಮದ್ ತೌಸೀಫ್ ಮತ್ತು ಪೋಷಕರು ಪ್ರಾಂಶುಪಾಲರೊಂದಿಗೆ ಸಭೆ ನಡೆಸಿದರು. ಹೈಕೋರ್ಟ್ ಆದೇಶದ ಪ್ರಕಾರ, ಹಿಜಾಬ್ ಧರಿಸಿರುವ ವಿದ್ಯಾರ್ಥಿಗಳನ್ನು ತರಗತಿಯೊಳಗೆ ಅನುಮತಿಸಲಾಗುವುದಿಲ್ಲ ಎಂದು ಪ್ರಾಂಶುಪಾಲರು ಅವರಿಗೆ ತಿಳಿಸಿದರು. ಕೆಲವು ಮುಸ್ಲಿಂ ಮುಖಂಡರು ವಿದ್ಯಾರ್ಥಿಗಳನ್ನು ಪರೀಕ್ಷೆ ಬರೆಯುವಂತೆ ಮಾತನಾಡಲು ಪ್ರಯತ್ನಿಸಿದರು, ಆದರೆ ಅವರು ಹಿಜಾಬ್ ಅನ್ನು ತೆಗೆಯಲು ನಿರಾಕರಿಸಿದರು ಎನ್ನಲಾಗಿದೆ.

Exit mobile version