• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನವರಾತ್ರಿ ಹಬ್ಬದ ಹಿನ್ನೆಲೆ ಗಗನಕ್ಕೇರಿದ ಹೂ ಹಣ್ಣು, ತರಕಾರಿ ಬೆಲೆ: ಗ್ರಾಹಕರ ಜೇಬಿಗೆ ಹೊರೆ.

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ನವರಾತ್ರಿ ಹಬ್ಬದ ಹಿನ್ನೆಲೆ ಗಗನಕ್ಕೇರಿದ ಹೂ ಹಣ್ಣು, ತರಕಾರಿ ಬೆಲೆ: ಗ್ರಾಹಕರ ಜೇಬಿಗೆ ಹೊರೆ.
0
SHARES
149
VIEWS
Share on FacebookShare on Twitter

In the wake of Navratri Festival, soaring prices of Flowers, Fruits and Vegetables: a burden on consumers’ pockets.

Bengaluru: ಹಬ್ಬ ಹರಿದಿನಗಳು ಬಂದರೆ ಸಾಕು ಹೂವು, ಹಣ್ಣು, ತರಕಾರಿಗಳ ಬೆಲೆ ಗಗನಕ್ಕೇರುತ್ತದೆ. ಇದೀಗ ನವರಾತ್ರಿ ಹಬ್ಬ (Navaratri Festival) ಆರಂಭವಾಗಿದ್ದು, ಹೂ ಹಣ್ಣು, ತರಕಾರಿ ಮತ್ತು ಅಗತ್ಯ ವಸ್ತುಗಳ ಬೆಲೆ ಜಿಗಿಯುತ್ತಿದೆ. ಗೌರಿ ಗಣೇಶ ಹಬ್ಬದ ನಂತರ ಹೂಗಳ ಬೆಲೆ ಇಳಿಕೆಯಾಗಿತ್ತು. ಆದರೆ ಇದೀಗ ಬೆಲೆ ಮತ್ತೆ ಗಗನಮುಖಿಯಾಗಿದೆ. ಅದರಲ್ಲೂ ಹಬ್ಬ ಬಂದರಂತೂ ಹೂಗಳ ಬೆಲೆ ಏರಿಕೆ ಸಾಮಾನ್ಯವಾಗಿದೆ.

ಮೊಳದ ಲೆಕ್ಕದಲ್ಲಿ ತೆಗೆದುಕೊಂಡರೂ ಅಷ್ಟೇ, ಕೆಜಿ ಲೆಕ್ಕದಲ್ಲಿ ತೆಗೆದುಕೊಂಡರೂ ಅಷ್ಟೇ, ಬೆಲೆ ಮಾತ್ರ ಕಡಿಮೆ ಇಲ್ಲವೇ ಇಲ್ಲ. ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು, ಉತ್ತಮ ಇಳುವರಿಯೂ ಬಂದಿದೆ. ಹಾಗಾಗಿ ಬೆಳೆಗಾರರು ಮತ್ತು ವ್ಯಾಪಾರಿಗಳ ಮುಖದಲ್ಲಿ ಸಂತಸ ಅರಳಿದೆ. ಆದರೆ ಗ್ರಾಹಕರ ಜೇಬಿಗೆ ಮಾತ್ರ ಹೊರೆಯಾಗಿದೆ.

ಇನ್ನು ಹೂವುಗಳ ಬೆಲೆಯನ್ನು ನೋಡುವುದಾದ್ರೆ ಮಲ್ಲಿಗೆ ಹೂ ಮಾರು ಒಂದಕ್ಕೆ 300-350 ರೂ ನಿಗದಿಯಾಗಿದ್ದರೆ ಸೇವಂತಿಗೆ ಮಾರಿಗೆ 100-150 ರೂ.ಗೆ ಏರಿಕೆಯಾಗಿದೆ.. ಗುಲಾಬಿ ಕೆಜಿಗೆ 300 ರೂ.ಗೆ ಏರಿಕೆಯಾಗಿದೆ. ಕೆಜಿ ಲೆಕ್ಕದಲ್ಲಿ ಸೇವಂತಿಗೆ-300; ಕಾಕಡ-500; ಕನಕಾಂಬರ-900; ಗುಲಾಬಿ-250; ಸುಗಂಧರಾಜ-60 ರೂಗಳಿಗೆ ಮಾರಾಟವಾಗುತ್ತಿದೆ. ಇದು ನಿನ್ನೆ ಮತ್ತು ಇಂದಿನ ಬೆಲೆಯಾಗಿದ್ದು, ಮುಂದೆ ಬೆಲೆ ಏರುತ್ತಲೇ ಹೋಗುತ್ತದೆಯೇ ಹೊರತು ಕಡಿಮೆಯಾಗುವುದಿಲ್ಲ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ.

ಹಾಗೆಂದು ಹಣ್ಣುಗಳ ಬೆಲೆ ಕಡಿಮೆ ಏನಿಲ್ಲ. ಅಂಗಡಿಗಳಲ್ಲಿ ದರಪಟ್ಟಿ ನೋಡಿದರೆ ಬರಿಗೈಯಲ್ಲಿ ಹಿಂತಿರುಗಿ ಬರುವ ಪರಿಸ್ಥಿತಿ ಇದೆ. ಮಧ್ಯಮ ವರ್ಗದ ಜನರಂತೂ ಖರೀದಿಗೆ ಹತ್ತು ಬಾರಿ ಯೋಚಿಸುವಂತಾಗಿದೆ. ದಾಳಿಂಬೆ ಕೆಜಿಗೆ 360 ರೂ ಇದ್ದು, 400 ರೂ ತಲುಪಲಿದೆ ಎಂದು ಹಣ್ಣಿನ ವ್ಯಾಪಾರಿಗಳೇ ಹೇಳುತ್ತಾರೆ. ಸೇಬು ಕೆಜಿಗೆ 280-300 ರೂ ಗೆ ನಿಗದಿಯಾಗಿದೆ.

ಸಾಮಾನ್ಯ ಸೇಬಿನ ಬೆಲೆ 200 ರೂ. ಆಸುಪಾಸಿನಲ್ಲಿದೆ. ಸೀತಾಫಲದ ಬೆಲೆ 160 ರೂ, ಬಾಳೆಹಣ್ಣಿನ ಬೆಲೆ 120 ರೂ.ಗೆ ಮಾರಾಟವಾಗುತ್ತಿದೆ. ತೆಂಗಿನ ಕಾಯಿ ಬೆಲೆ ಗಾತ್ರದ ಮೇಲೆ ನಿಗದಿಯಾಗಿದ್ದು, ಉತ್ತಮ ಕಾಯಿಯ ಬೆಲೆ 35 ರೂ.ಗೆ ಮಾರಾಟವಾಗುತ್ತಿದೆ. (Fruits) ಬಿಡಿ ಬಾಳೆಎಲೆ ಒಂದಕ್ಕೆ 10 ರೂ.ಗೆ ಮಾರಲಾಗುತ್ತಿದೆ. ಇನ್ನು ತರಕಾರಿ ಬೆಲೆಯೂ ಮುಂದಿನ ದಿನಗಳಲ್ಲಿ ಹೆಚ್ಚುತ್ತದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಗ್ರಾಹಕರ ಜೇಬಿಗೆ ಕತ್ತರಿ ಬೀಳೋದಂತೂ ಖಚಿತವಾಗಿದೆ .

Dasara 2024-Fruits Flowers Prices Hike In Bengaluru

Tags: dussehraFlowersfruitsPrice Hiked

Related News

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ
ಪ್ರಮುಖ ಸುದ್ದಿ

ತಿಂಗಳಿಗೆ ₹10,000 ಹೂಡಿಕೆ ಮಾಡಿದರೆ ನಿವೃತ್ತಿ ಜೀವನ ಭದ್ರ: ಪೋಸ್ಟ್ ಆಫೀಸ್ FD ಮತ್ತು RD ಯೋಜನೆಗಳಿಂದ ಸುರಕ್ಷಿತ ಭವಿಷ್ಯ ಕಟ್ಟಿಕೊಳ್ಳುವ ಸುಲಭ ಮಾರ್ಗ

May 9, 2026
ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ
ಪ್ರಮುಖ ಸುದ್ದಿ

ಬಂಗಾಳ ರಾಜಕೀಯದಲ್ಲಿ ಹೊಸ ಅಧ್ಯಾಯ: ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣ ವಚನ

May 9, 2026
ಪಂಚರಾಜ್ಯ ಫಲಿತಾಂಶ: ಬಂಗಾಳದಲ್ಲಿ ಅರಳಿದ ಕಮಲ, ತಮಿಳುನಾಡಿನಲ್ಲಿ ವಿಜಯ್ ಜಯ,ದೀದಿ-ಸ್ಟಾಲಿನ್-ಪಿಣರಾಯಿ ಮಹಾ ಪತನ
ಪ್ರಮುಖ ಸುದ್ದಿ

ಮ್ಯಾಜಿಕ್ ಸಂಖ್ಯೆಗೆ ಇನ್ನೂ ಎರಡು ಸ್ಥಾನ ಕೊರತೆ: ಟಿವಿಕೆ ಸರ್ಕಾರ ರಚನೆಗೆ ಮುಂದುವರಿದ ಕಸರತ್ತು

May 9, 2026
ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ
ಪ್ರಮುಖ ಸುದ್ದಿ

ಮನರೇಗಾ ಯೋಜನೆ ಮುಂದುವರಿಸಲು ಸುಪ್ರೀಂ ಕೋರ್ಟ್ ಕದ ತಟ್ಟಲು ಮುಂದಾದ ರಾಜ್ಯ ಸರ್ಕಾರ

May 8, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.