ಮೋಸ್ಟ್ ವಾಂಟೆಡ್ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲು: ವಿಷಪ್ರಾಶನ ಶಂಕೆ

Karachi: ಭಾರತಕ್ಕೆ ಬೇಕಾಗಿರುವ ಮೋಸ್ಟ್ ವಾಂಟೆಡ್ (Most Wanted) ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದ್ದು, ತೀವ್ರ ಸ್ವರೂಪದ ಖಾಯಿಲೆಯಿಂದ ಬಳಲುತ್ತಿರುವ ದಾವೂದ್ ಇಬ್ರಾಹಿಂಗೆ (Dawood Ibrahim) ವಿಷಪ್ರಾಶನ ಮಾಡಲಾಗಿದೆ ಎಂದು ವರದಿಯಾಗಿದೆ.

ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಭಾರತಕ್ಕೆ (India) ಬೇಕಾಗಿದ್ದ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕರಾಚಿಯ ಆಸ್ಪತ್ರೆಗೆ ದಾಖಲಾಗಿದ್ದು, ಈತನಿಗೆ ವಿಷಪ್ರಾಶನ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆಸ್ಪತ್ರೆ ಬಳಿ ಬಿಗಿ ಭದ್ರತೆ ನೀಡಲಾಗಿದ್ದು, ಈತನ ಬಂಧನಕ್ಕೆ ಹಲವು ವರ್ಷಗಳಿಂದ ಎನ್​ಐಎ (NIA) ತನಿಖೆ ನಡೆಸುತ್ತಲೇ ಇದೆ.

ಮೋಸ್ಟ್ ವಾಂಟೆಡ್ ಕ್ರಿಮಿನಲ್ಗಳ (Criminals) ಪೈಕಿ ಒಬ್ಬನಾದ ದಾವೂದ್ ಇಬ್ರಾಹಿಂ ಸಂಘಟಿತ ಅಪರಾಧ, ಭಯೋತ್ಪಾದನೆ ಮತ್ತು ಮಾದಕವಸ್ತು ಕಳ್ಳಸಾಗಣೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾರತಕ್ಕೆ ಬೇಕಾಗಿರುವ ಪ್ರಮುಖ ಆರೋಪಿಯಾಗಿದ್ದು, ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಭಾರತ ಹಾಗೂ ಪಾಕಿಸ್ತಾನದ (Pakistan) ಅಧಿಕಾರಿಗಳು ಖಚಿತಪಡಿಸಿಲ್ಲ. ಹಠಾತ್ ಆರೋಗ್ಯ ಹದಗೆಡಲು ವಿಷವೇ ಕಾರಣ ಎಂಬ ಊಹಾಪೋಹಗಳು ದಟ್ಟವಾಗಿದ್ದು, ಕರಾಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಆಸ್ಪತ್ರೆಗೆ ದಾಖಲಾಗಿ ಇಂದಿಗೆ ಎರಡು ದಿನಗಳಾಗಿದ್ದು, ಮಹಡಿಯೊಂದರಲ್ಲಿ ಇದ್ದ ರೋಗಿಗಳನ್ನು ಬೇರೆಡೆಗೆ ಶಿಫ್ಟ್ ಮಾಡಿ ಈತನಿಗೆ ಮಾತ್ರ ಚಿಕಿತ್ಸೆ (Treatment) ನೀಡಲಾಗುತ್ತಿದ್ದು, ಬಿಗಿ ಭದ್ರತೆ ಕಲ್ಪಿಸಲಾಗಿದೆ. ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಮಹಡಿಗೆ ಪ್ರವೇಶ ನೀಡಲಾಗುತ್ತಿದ್ದು, ಮುಂಬೈ ಪೊಲೀಸರು ಭೂಗತ ಪಾತಕಿ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಆತನ ಸಂಬಂಧಿಕರಾದ ಅಲಿಶಾ ಪಾರ್ಕರ್ (Alisha Parker) ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

ಜನವರಿಯಲ್ಲಿ, ದಾವೂದ್‌ನ ಸಹೋದರಿ ಹಸೀನಾ ಪಾರ್ಕರ್‌ನ (Haseena Parker) ಮಗ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಭೂಗತ ಲೋಕದ ಡಾನ್ ಎರಡನೇ ಬಾರಿಗೆ ಮದುವೆಯಾದ ನಂತರ ಕರಾಚಿಯಲ್ಲಿ ಉಳಿದುಕೊಂಡಿದ್ದಾನೆ ಎಂದು ತಿಳಿಸಿದ್ದರು. ಮುಂಬೈನಲ್ಲಿ 1993ರಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಸ್ಫೋಟದಲ್ಲಿ 250 ಕ್ಕೂ ಹೆಚ್ಚು ಅಮಾಯಕ ನಾಗರಿಕರು ಸಾವನ್ನಪ್ಪಿದ್ದರು. 750ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು.

ಮುಂಬೈನ (Mumbai) ಭೀಕರ ಸ್ಫೋಟದ ಮಾಸ್ಟರ್ ಮೈಂಡ್ (Master Mind) ದಾವೂದ್ ಇಬ್ರಾಹಿಂ ಆಗಿದ್ದು, ಭಾರತ ಮತ್ತು ಅಮೆರಿಕದಿಂದ ಅಂತಾರಾಷ್ಟ್ರೀಯ ಭಯೋತ್ಪಾದಕ ಎಂದು ಗುರುತಿಸಲ್ಪಟ್ಟಿರುವ ದಾವೂದ್ ಇಬ್ರಾಹಿಂ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿದ್ದಾನೆ. ದಾವೂದ್ ಇಬ್ರಾಹಿಂ ತಲೆಗೆ ಎನ್‌ಐಎ 25 ಲಕ್ಷ ಬಹುಮಾನವನ್ನೂ ಘೋಷಿಸಿದ್ದು, ಭಾರತಕ್ಕೆ ಬೇಕಾಗಿರುವ ಉಗ್ರರ ಪಟ್ಟಿಯಲ್ಲಿ ದಾವೂದ್ ಇಬ್ರಾಹಿಂ ಮೊದಲ ಸ್ಥಾನದಲ್ಲಿದ್ದಾನೆ

ಭವ್ಯಶ್ರೀ ಆರ್ ಜೆ

Exit mobile version