ದಯವಿಟ್ಟು ಗಮನಿಸಿ: ನೈಟ್ ಕರ್ಫ್ಯೂ ಇಂದಿನಿಂದಲ್ಲ ನಾಳೆ(ಡಿ.24)ಯಿಂದ ಜಾರಿ

ಬೆಂಗಳೂರು, ಡಿ. 23: ಕೊರೊನಾ ರೂಪಾಂತರದ ಹಿನ್ನೆಲೆ ರಾಜ್ಯದಲ್ಲಿ ವಿಧಿಸಲಾಗಿದ್ದ ನೈಟ್ ಕರ್ಫ್ಯೂ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಲಾಗಿದ್ದು, ಇಂದಿನಿಂದ ಜಾರಿಯಾಗಬೇಕಿದ್ದ ನೈಟ್ ಕರ್ಪ್ಯೂವನ್ನು ಡಿ.24ರಿಂದ ಜಾರಿಗೊಳಿಸುವುದಾಗಿ ಸರ್ಕಾರ ತಿಳಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ಕರ್ನಾಟಕ ರಾಜ್ಯದಲ್ಲಿ ಇಂದಿನಿಂದ ಜಾರಿ ಮಾಡಲು ಉದ್ದೇಶಿಸಿದ್ದ ರಾತ್ರಿ ಕರ್ಫ್ಯೂ ಬದಲಾಗಿ ನಾಳೆ, ಅಂದರೆ ದಿನಾಂಕ 24.12.2020 ರಿಂದ ಜನವರಿ 01, 2021 ರವರೆಗೆ, ರಾತ್ರಿ 11:00 ಗಂಟೆಯಿಂದ ಬೆಳಗ್ಗೆ 5:00 ಗಂಟೆಯವರೆಗೆ (ದಿನಾಂಕ 02.01.2021ರ ಬೆಳಗ್ಗೆ 5:00 ಗಂಟೆ) ಜಾರಿಯಲ್ಲಿರುತ್ತದೆ.

ರಾತ್ರಿ ಕರ್ಫ್ಯೂ ಸಂದರ್ಭದಲ್ಲಿ, ದಿನಾಂಕ 24.12.2020 ರ ರಾತ್ರಿ ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ನಡೆಯಲಿರುವ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು (ಮಿಡ್ ನೈಟ್ ಮಾಸ್) ಯಾವುದೇ ಅಡಚಣೆಯಿಲ್ಲದೆ ಮಾಡಬಹುದು ಎಂದು ತಿಳಿಸಿದ್ದಾರೆ.

Exit mobile version